Karnataka NewsLatest
*ಭೀಕರ ರಸ್ತೆ ಅಪಘಾತ: ನಾಲ್ವರು ಸ್ಥಳದಲ್ಲೇ ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಭೀಕರ ರಸ್ತೆ ಅಪಘಾತದಲ್ಲಿ ನಾಲ್ವರು ಸಾವನ್ನಪ್ಪಿರುವ ಘಟನೆ ಹುಬ್ಬಳ್ಳಿ ಹೊರವಲಯದ ನೂಲ್ವಿ ಕ್ರಾಸ್ ಬಳಿ ನಡೆದಿದೆ.
ಡಿವೈಡರ್ ಗೆ ಕಾರು ಡಿಕ್ಕಿ ಹೊಡೆದ ಪರಿಣಾಮ ಸ್ಥಳದಲ್ಲೇ ಮೂವರು ಮಹಿಳೆಯರು ಸೇರಿ ನಾಲ್ವರು ಮೃತಪಟ್ಟಿದ್ದಾರೆ. ಇಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗುದೆ.
ಮೃತರು ಹುಬ್ಬಳ್ಳಿಯ ಲಿಂಗರಾಜನಗರ ನಿವಾಸಿಗಳು. ಹುಬ್ಬಳ್ಳಿ ಗ್ರಾಮಾಂತಾರ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.




