
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ಭೇಟಿ ನೀಡಿದ ಸಿಎಂ ಬಿ ಎಸ್ ಯಡಿಯೂರಪ್ಪ, ನಾಡೋಜ ಡಾ.ಪಾಟೀಲ ಪುಟ್ಟಪ್ಪ ಅವರ ಆರೋಗ್ಯ ವಿಚಾರಿಸಿ, ಪಾಪು ಕುಟುಂಬಸ್ಥರೊಂದಿಗೆ ಸಮಾಲೋಚನೆ ನಡೆಸಿದರು.
ಈ ವೇಳೆ ಮಾತನಾಡಿದ ಸಿಎಂ, ಹಿರಿಯ ಪತ್ರಕರ್ತ, ರಾಜ್ಯಸಭೆಯ ಮಾಜಿ ಸದಸ್ಯರೂ ಆಗಿರುವ ನಾಡೋಜ ಪಾಟೀಲ ಪುಟ್ಟಪ್ಪನವರಿಗೆ ರಾಜ್ಯ ಸರ್ಕಾರದಿಂದ ಕೊಡಮಾಡುವ 2017ನೇ ಸಾಲಿನಲ್ಲಿ ಘೋಷಿಸಿದ್ದ ಬಸವ ರಾಷ್ಟ್ರೀಯ ಪುರಸ್ಕಾರ ಪ್ರಶಸ್ತಿಯನ್ನು ಶೀಘ್ರದಲ್ಲೇ ಪ್ರದಾನ ಮಾಡಲಾಗುವುದು ಎಂದು ತಿಳಿಸಿದರು.
ರಾಷ್ಟ್ರೀಯ ಬಸವ ಪುರಸ್ಕಾರದೊಂದಿಗೆ ಹತ್ತು ಲಕ್ಷ ರೂ. ನಗದು ನೀಡಲಾಗುವುದು. ಅಲ್ಲದೆ ಡಾ.ಪಾಟೀಲ ಪುಟ್ಟಪ್ಪ ಅವರ ಚಿಕಿತ್ಸೆ ವೆಚ್ಚವನ್ನು ಸರ್ಕಾರವೇ ಭರಿಸಲಿದೆ. ಪುಟ್ಟಪ್ಪನವರು ಸದ್ಯ ಕೃತಕ ಉಸಿರಾಟ ವ್ಯವಸ್ಥೆಯಲ್ಲಿದ್ದು, ಶೀಘ್ರ ಗುಣಮುಖರಾಗಲಿ ಎಂದು ದೇವರಲ್ಲಿ ಪ್ರಾರ್ಥಿಸುವುದಾಗಿ ತಿಳಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ