Kannada NewsKarnataka NewsLatestUncategorized

*ಕಾಲೇಜು ವಿದ್ಯಾರ್ಥಿನಿಯರ ಫೋಟೊ ಅಶ್ಲೀಲವಾಗಿ ಎಡಿಟ್ ಮಾಡಿ ಪೋಸ್ಟ್; ವಿದ್ಯಾರ್ಥಿ ಅರೆಸ್ಟ್*

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಖಾಸಗಿ ಕಾಲೇಜಿನ ವಿದ್ಯಾರ್ಥಿನಿಯರ ಫೋಟೋಗಳನ್ನು ಅಶ್ಲೀಲವಾಗಿ ಎಡಿಟ್ ಮಾಡಿ ಅವುಗಳನ್ನು ಇನ್ ಸ್ಟಾಗ್ರಾಂ ನಲ್ಲಿ ಶೇರ್ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಅದೇ ಕಾಲೇಜಿನ ವಿದ್ಯಾರ್ಥಿಯನ್ನು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

21 ವರ್ಷದ ರಜನಿಕಾಂತ್ ತಳವಾರ ಬಂಧಿತ ಆರೋಪಿ. ಈ ಕುರಿತು ಹುಬ್ಬಳ್ಳಿ-ಧಾರವಡ ಪೊಲೀಸ್ ಆಯುಕ್ತ ಸಂತೋಷ್ ಬಾಬು ಮಾಹಿತಿ ನೀಡಿದ್ದಾರೆ. ಕಡಿಮೆ ಹಾಜರಾತಿ ಹಿನ್ನೆಲೆಯಲ್ಲಿ ಈ ಬಾರಿ ವಿದ್ಯಾರ್ಥಿಗೆ ಕಾಲೇಜಿನಲ್ಲಿ ಅಡ್ಮಿಷನ್ ನೀಡಿರಲಿಲ್ಲ. ಇದಕ್ಕಾಗಿ ಆತ ಬಾಯ್ ಫ್ರೆಂಡ್ ಇರುವ ವಿದ್ಯಾರ್ಥಿನಿಯರನ್ನೇ ಟಾರ್ಗೆಟ್ ಮಾಡುತ್ತಿದ್ದ. ಸುಮಾರ10 ವಿದ್ಯಾರ್ಥಿನಿಯರ ಫೋಟೊಗಳನ್ನು ಅಶ್ಲೀಲ ರೀತಿಯಲ್ಲಿ ಎಡಿಟ್ ಮಾಡಿ ವೈರಲ್ ಮಾಡುತ್ತಿದ್ದ.

Related Articles

ಸಧ್ಯ ಆರೋಪಿಯನ್ನು ಬಂಧಿಸಿ ಆತನ ಮೇಲ್ ಐಡಿ, ಸಾಮಾಜಿಕ ಜಾಲತಾಣಗಳ ವಿವರಗಳನ್ನು ವಿಧಿವಿಜ್ಞಾನಕ್ಕೆ ರವಾನಿಸಲಾಗಿದೆ. ಮೂರು ದಿನಗಳ ಹಿಂದೆಯೇ ವಿದ್ಯಾರ್ಥಿಯನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಲಾಗಿದೆ. ಆತನ ಹಿಂದೆ ಬೇರೆಯವರು ಇರುವ ಶಮ್ಕೆ ಇದೆ ಈ ಬಗ್ಗೆಯೂ ತನಿಖೆ ನಡೆಸಲಾಗುತ್ತಿದೆ ಎಂದು ತಿಳಿಸಿದ್ದಾರೆ.


Home add -Advt

Related Articles

Back to top button