ಗರ್ಭಿಣಿ ಮಹಿಳೆಗೆ ಕೊರೊನಾ ಸೋಂಕು: ಗರ್ಭಪಾತ ಮಾಡಿಸಿದ ವೈದ್ಯರು

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ವಾಣಿಜ್ಯ ನಗರಿ ಕಿಮ್ಸ್ ನಲ್ಲಿ ಕೊರೊನಾ ಸೋಂಕಿತ ಗರ್ಭಿಣಿಗೆ ಇಂದು ಬೆಳಗ್ಗೆ ಗರ್ಭಪಾತ ಮಾಡಲಾಗಿದ್ದು, ಮಹಿಳೆಯ ಆರೋಗ್ಯ ಸ್ಥಿರವಾಗಿದೆ.

ಬಾಗಲಕೋಟೆ ಜಿಲ್ಲೆಯ ಬದಾಮಿ ತಾಲೂಕಿನ 23 ವರ್ಷದ ಗರ್ಭಿಣಿ ಮಹಿಳೆ ಕೊರೊನಾ ಕಾರಣದಿಂದ ಮಾನಸಿಕವಾಗಿ ತೀವ್ರವಾಗಿನೊಂದಿದ್ದರು. ದೇಹದಲ್ಲಿ ಸೋಡಿಯಮ್ ಅಂಶ ಕೂಡ ಕಡಿಮೆಯಾಗಿ ಸುಸ್ತಾಗಿದ್ದು, ಅಲ್ಸರ್ ಉಂಟಾಗಿ ಊಟ ಮಾಡಲು ಆಗುತ್ತಿರಲಿಲ್ಲ. ಜೊತೆಗೆ ಹಿಮೋಗ್ಲೋಬಿನ್ ಕಡಿಮೆಯಾಗಿ ರಕ್ತ ನೀಡಲಾಗಿತ್ತು. ಹೀಗಾಗಿ ಮಹಿಳೆ ಉಳಿಸಿಕೊಳ್ಳಲು ಗರ್ಭಪಾತ ಅನಿವಾರ್ಯವಾಗಿತ್ತು. ಆದ್ದರಿಂದ ವೈದ್ಯರು ಗರ್ಭಪಾತ ಮಾಡಿದ್ದಾರೆ.

ಇದಕ್ಕಾಗಿ ವಿಶೇಷ ತಂಡ ರಚನೆ ಮಾಡಿ ಮಹಿಳೆ ಕುಟುಂಬಕ್ಕೆ ಅಗತ್ಯ ಮನವರಿಕೆ ಮಾಡಿಕೊಟ್ಟಿದ್ದೇವೆ. ಮಾತ್ರೆಗಳನ್ನು ನೀಡುವ ಮೂಲಕ ಗರ್ಭಪಾತ ಮಾಡಲಾಗಿದೆ. ಮಹಿಳೆಯ ಆರೋಗ್ಯ ಸ್ಥಿರವಾಗಿದೆ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ತಿಳಿಸಿದ್ದಾರೆ.

ಬಾದಾಮಿ ತಾಲೂಕಿನ ಢಾಣಕಶಿರೂರ ಗ್ರಾಮದ ಗರ್ಭಿಣಿ ಕೋವಿಡ್ 19 ಸೋಂಕು ದೃಢಪಟ್ಟು ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ಇನ್ನು ಸೋಂಕು ದೃಢಪಟ್ಟಿರುವ ಗರ್ಭಿಣಿಯ ಪತಿ ಸೇರಿದಂತೆ ಕುಟುಂಬದವರೆಲ್ಲ ಸರ್ಕಾರಿ ಕ್ವಾರಂಟೈನ್‍ನಲ್ಲಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button