*BREAKING NEWS: ಹುಬ್ಬಳ್ಳಿ: ಕಾಲೇಜಿನಲ್ಲಿಯೇ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ಕಾರ್ಪೊರೇಟರ್ ಓರ್ವರ ಮಗಳನ್ನು ಹಾಡಹಗಲೇ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ಪ್ರತಿಷ್ಠಿತ ಬಿವಿಬಿ ಕಾಲೇಜಿನಲ್ಲಿ ನಡೆದಿದೆ. ನೇಹಾ ಕೊಲೆಯಾದ ವಿದ್ಯಾರ್ಥಿನಿ. ಕಾರ್ಪೊರೇಟರ್ ನಿರಂಜನ್ ಹಿರೇಮಠ ಎಂಬುವವರ ಮಗಳು. ಎಂದಿನಂತೆ ಕಾಲೇಜಿಗೆ ಬಂದಿದ್ದ ನೇಹಾಳನ್ನು ಕಾಲೇಜು ಆವರಣದಲ್ಲಿಯೇ ದುಷ್ಕರ್ಮಿಗಳು ಚಾಕು ಇರಿದು ಬರ್ಬರವಾಗಿ ಹತ್ಯೆ ಮಾಡಿದ್ದಾರೆ. ಹಾಡಹಗಲೇ ಪ್ರತಿಷ್ಠಿತ ಕಾಲೇಜು ಆವರಣದಲ್ಲಿ ನಡೆದ ಘಟನೆ ಕಂಡ ವಿದ್ಯಾರ್ಥಿಗಳು ಬೆಚ್ಚಿ ಬಿದ್ದಿದ್ದಾರೆ. ಕೃತ್ಯದ ಬಳಿಕ ಘಟನಾ ಸ್ಥಳದಲ್ಲೇ ಚಾಕು ಬಿಟ್ಟು ಆರೋಪಿಗಳು ಎಸ್ಕೇಪ್ ಆಗಿದ್ದಾರೆ.Home add … Continue reading *BREAKING NEWS: ಹುಬ್ಬಳ್ಳಿ: ಕಾಲೇಜಿನಲ್ಲಿಯೇ ಕಾರ್ಪೊರೇಟರ್ ಮಗಳ ಬರ್ಬರ ಹತ್ಯೆ*