ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ; ಸೋಂಕಿತ ಮಹಿಳೆ ಮೇಲೆ ವಾರ್ಡ್ ಬಾಯ್ ನಿಂದ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ವಾರ್ಡ್ ಬಾಯ್ ನನ್ನು ಪೊಲೀಸರು ಬಂಧಿಸಿರುವ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.
ಅಶೋಕ್ ಹಲಗಿ ಬಂಧಿತ ವಾರ್ಡ್ ಬಾಯ್. ಹುಬ್ಬಳ್ಳಿಯ ಬಾಲಾಜಿ ಆಸ್ಪತ್ರೆಯಲ್ಲಿ ಈ ಘಟನೆ ನಡೆದಿದೆ. ಬಳ್ಳಾರಿ ಮೂಲದ 52 ವರ್ಷದ ಕೊರೊನಾ ಸೋಂಕಿತ ಮಹಿಳೆ ಮೇಲೆ ವಾರ್ಡ್ ಬಾಯ್ ಲೈಂಗಿಕ ದೌರ್ಜನ್ಯವೆಸಗಿದ್ದಾಗಿ ಮಹಿಳೆಯ ಪುತ್ರ ದೂರು ನೀಡಿದ್ದರು.
ಈ ಹಿನ್ನೆಲೆಯಲ್ಲಿ ವಿದ್ಯಾನಗರ ಪೊಲೀಸರು ಆರೋಪಿಯನ್ನು ಬಂಧಿಸಿದ್ದಾರೆ
ಬಿ.ವೈ.ವಿಜಯೇಂದ್ರ ದಿಢೀರ್ ದೆಹಲಿಗೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ