Karnataka News

*ಸಿಲಿಂಡರ್ ಸ್ಫೋಟ ಪ್ರಕರಣ: ಗಾಯಗೊಂಡಿದ್ದ ಮತ್ತೋರ್ವ ಅಯ್ಯಪ್ಪ ಮಾಲಾಧಾರಿ ಸಾವು*

ಪ್ರಗತಿವಾಹಿನಿ ಸುದ್ದಿ: ಹುಬ್ಬಳ್ಳಿಯಲ್ಲಿ ನಡೆದ ಗ್ಯಾಸ್ ಸಿಲಿಂಡರ್ ಸ್ಫೋಟ ಪ್ರಕರಣದಲ್ಲಿ ಗಾಯಗೊಂಡಿದ್ದ ಮತ್ತೋರ್ವ ಅಯ್ಯಪ್ಪಮಾಲಾಧಾರಿ ಮೃತಪಟ್ಟಿದ್ದು, ಸಾವಿನ ಸಂಖ್ಯೆ 6ಕ್ಕೆ ಏರಿಕೆಯಾಗಿದೆ.

ಹುಬ್ಬಳ್ಳಿಯ ಸಾಯಿನಗರದ ಈಶ್ವರ ದೇವಸ್ಥಾನದಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ ಸಂಭವಿಸಿ 9 ಜನ ಅಯ್ಯಪ್ಪ ಮಾಲಾಧಾರಿಗಳು ಗಂಭೀರವಾಗಿ ಗಾಯಗೊಂಡಿದ್ದರು. ಗಾಯಾಳುಗಳನ್ನು ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಿನ್ನೆವರೆಗೆ ನಾಲ್ವರು ಗಾಯಾಳುಗಳು ಚಿಕಿತ್ಸೆ ಫಲಿಸದೇ ಸಾವನ್ನಪ್ಪಿದ್ದರು. ಇಂದು ಇಬ್ಬರು ಗಾಯಾಳುಗಳು ಸಾವನ್ನಪ್ಪಿದ್ದಾರೆ.

ಈವರೆಗೆ ಒಟ್ಟು 6 ಜನ ಗಾಯಾಳುಗಳು ಸಾವನ್ನಪ್ಪಿದ್ದು, ಕುಟುಬದವರ ಆಕ್ರಂದನ ಮುಗಿಲುಮುಟ್ಟಿದೆ. ಇನ್ನು ಮೂವರಿಗೆ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ಮುಂದುವರೆದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button