ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ರಾಜ್ಯಾದ್ಯಂತ ವರುಣನ ಅಬ್ಬರ ಜೋರಾಗಿದ್ದು, ನದಿಗಳು ಅಪಾಯದಮಟ್ಟ ಮೀರಿ ಹರಿಯುತ್ತಿವೆ. ಹುಬ್ಬಳ್ಳಿಯ ಕಲಘಟಗಿಯಲ್ಲಿ ನೀರಿನ ಸೆಳೆತಕ್ಕೆ ತೇಲಿಹೋಗಿದ್ದ ಬಾಲಕಿ ಸಾವನ್ನಪ್ಪಿದ್ದು, ಇದೀಗ ಮೃತದೇಹ ಪತ್ತೆಯಾಗಿದೆ.
ಕಲಘಟಗಿ ತಾಲೂಕಿನ ಗಂಜಿಗಟ್ಟಿ ಗ್ರಾಮದ ಹಿರೇಕೆರೆಯಲ್ಲಿ ಈ ಘಟನೆ ನಡೆದಿದ್ದು, 8 ವರ್ಷದ ಬಾಲಕಿ ಶ್ರೀದೇವಿ ಹನುಮಂತಪ್ಪ ಗಾಣಿಗೇರ ದೇಹ ಇದೀಗ ತೇಲಿ ಹೋದ ಸ್ಥಳದ ಸುಮಾರು ಒಂದೂವರೆ ಕಿ.ಮೀ ಅಂತರದಲ್ಲಿ ಪತ್ತೆಯಾಗಿದೆ.
ಎರಡು ದಿನಗಳ ಹಿಂದೆ ಬಾಲಕಿ ನೀರಿನ ಸೆಳೆತಕ್ಕೆ ಸಿಲುಕಿ ಕೊಚ್ಚಿ ಹೋಗಿದ್ದಳು. ಅಂದಿನಿಂದ ನಿರಂತರವಾಗಿ ಎನ್‍ಡಿಆರ್‍ಎಫ್ ಹಾಗೂ ಅಗ್ನಿಶಾಮಕ ಹಾಗೂ ತುರ್ತು ಸೇವೆಗಳ ಇಲಾಖೆಯ ಸಿಬ್ಬಂದಿ ಹಗಲು-ರಾತ್ರಿ ಕಾರ್ಯಾಚರಣೆ ನಡೆಸಿದ್ದರು. ಇದೀಗ ಬಾಲಕಿಯ ದೇಹ ಪತ್ತೆಯಾಗಿದ್ದು ಮರಣೋತ್ತರ ಪರೀಕ್ಷೆ ನಡೆಸಿ ಮೃತದೇಹವನ್ನು ಕುಟುಂಬಕ್ಕೆ ಹಸ್ತಾಂತರಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ