
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ; ಪ್ರಾಧ್ಯಾಪಕರೊಬ್ಬರಿಗೆ ಹನಿಟ್ರ್ಯಾಪ್ ಮಾಡಿ ವಂಚಿಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ವಿಧಿಸಿ ಹುಬ್ಬಳ್ಳಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಆರೋಪಿಗಳಾದ ಯುವತಿ ಅನಘಾ, ಗಣೇಶ್ ಶೆಟ್ಟಿ, ರಮೇಶ್ ಹಜಾರೆ, ವಿನಾಯಕ ಹಜಾರೆಗೆ ಜೀವಾವಧಿ ಶಿಕ್ಷೆ ವಿಧಿಸಲಾಗಿದೆ. 2017ರಲ್ಲಿ ಕಾಲೇಜು ಕಾರ್ಯಕ್ರಮವೊಂದಕ್ಕೆ ಬಂದಿದ್ದ ಯುವತಿ ಹಾಗೂ ಗ್ಯಾಂಗ್ ಪ್ರಾಧ್ಯಾಪಕರೊಬ್ಬರನ್ನು ಪರಿಚಯಿಸಿಕೊಂಡು ಹನಿಟ್ರ್ಯಾಪ್ ಖೆಡ್ಡಾಗೆ ಕೆಡವಿತ್ತು. ಬಳಿಕ ಬ್ಲ್ಯಾಕ್ ಮೇಲ್ ಮಾಡಿ ಅವರಿಂದ 5 ಲಕ್ಷ ರೂ ಬೇಡಿಕೆ ಇಟ್ಟಿತ್ತಲ್ಲದೇ ಪ್ರಾಧ್ಯಾಪಕರನ್ನು ಎಟಿಎಂಗೆ ಕರೆದೊಯ್ದು ಅವರಿಂದಲೇ ಹಣ ಡ್ರಾ ಮಾಡಿಸಿಕೊಂಡು, ಅವರ ಮೇಲೆ ಮಾರಣಾಂತಿಕ ಹಲ್ಲೆ ನಡೆಸಿ ಸಿದ್ಧಾರೂಢ ಮಠದ ಬಳಿ ಪ್ರಾದ್ಯಾಪಕರನ್ನು ಬಿಸಾಡಿ ಪರಾರಿಯಾಗಿತ್ತು.
ಹನಿಟ್ರ್ಯಾಪ್ ಗೆ ಒಳಗಾದ ಪ್ರಾಧ್ಯಾಪಕರು ಹಳೆ ಹುಬ್ಬಳ್ಳಿ ಠಾಣೆಯಲ್ಲಿ ದೂರು ದಾಖಲಿಸಿದ್ದರು. ಯುವತಿ ಹಾಗೂ ಮೂವರು ಸಹಚರರನ್ನು ಪೊಲೀಸರು ಬಂಧಿಸಿದ್ದರು. ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಇದೀಗ ನಾಲ್ವರು ಆರೋಪಿಗಳಿಗೆ ಜೀವಾವಧಿ ಶಿಕ್ಷೆ ಪ್ರಕಟವಾಗಿದೆ ಎಂದು ತಿಳಿದುಬಂದಿದೆ.
ಮಹಿಳೆ ಮೇಲೆ ಆಸಿಡ್ ದಾಳಿ; ನಾಲ್ವರು ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ