Latest

ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು; ಇನ್ಸ್‌ಪೆಕ್ಟರ್ ಸಸ್ಪೆಂಡ್

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಪಾಕ್ ಪರ ಘೋಷಣೆ ಕೂಗಿದ್ದ ಕಾಶ್ಮೀರಿ ವಿದ್ಯಾರ್ಥಿಗಳಿಗೆ ಜಾಮೀನು ನೀಡಿದ ಪ್ರಕರಣದಲ್ಲಿ ಕರ್ತವ್ಯ ಲೋಪ ತೋರಿದ ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್ ನ್ನು ಅಮಾನತು ಮಾಡಲಾಗಿದೆ.

ಉತ್ತರ ವಲಯ ಐಜಿಪಿ ರಾಘವೇಂದ್ರ ಸುಹಾಸ್ ಅವರು ಹುಬ್ಬಳ್ಳಿ ಗ್ರಾಮೀಣ ಠಾಣೆಯ ಇನ್ಸ್‌ಪೆಕ್ಟರ್ ಜಾಕ್ಸನ್ ಡಿಸೋಜಾರನ್ನು ಅಮಾನತು ಮಾಡಿ ಆದೇಶ ಹೊರಡಿಸಿದ್ದಾರೆ. 90 ದಿನದೊಳಗೆ ಪ್ರಕರಣದ ಚಾರ್ಜ್ ಶೀಟ್ ಸಲ್ಲಿಸದ ಹಿನ್ನೆಲೆಯಲ್ಲಿ ಹುಬ್ಬಳ್ಳಿಯ 2ನೇ ಜೆಎಂಎಫ್‍ಸಿ ನ್ಯಾಯಾಲಯದಿಂದ ಆರೋಪಿಗಳಿಗೆ ಜಾಮೀನು ಸಿಕ್ಕಿತ್ತು.

ಪ್ರಕರಣದಲ್ಲಿ ಹುಬ್ಬಳ್ಳಿಯ ಗ್ರಾಮೀಣ ಠಾಣೆ ಪೊಲೀಸರ ನಿರ್ಲಕ್ಷ ಕಂಡು ಬಂದಿತ್ತು. ಆದ್ದರಿಂದ ಕರ್ತವ್ಯ ಲೋಪ, ನಿರ್ಲಕ್ಷ್ಯತನಕ್ಕೆ ಹುಬ್ಬಳ್ಳಿ ಗ್ರಾಮೀಣ ಠಾಣೆ ಇನ್ಸ್‌ಪೆಕ್ಟರ್ ಡಿಸೋಜಾರನ್ನು ಅಮಾನತು ಮಾಡಲಾಗಿದೆ.

ದೇಶದ್ರೋಹಿ ಘೋಷಣೆ ಕೂಗಿದ್ದ ಮೂವರು ಕಾಶ್ಮೀರಿ ವಿದ್ಯಾರ್ಥಿಗಳಿಗೆ ಹುಬ್ಬಳ್ಳಿಯ ಜೆಎಂಎಫ್‍ಸಿ-2 ನ್ಯಾಯಾಲಯ ಗುರುವಾರ ಜಾಮೀನಿನ ಮೇಲೆ ಆರೋಪಿಗಳನ್ನು ಬಿಡುಗಡೆ ಮಾಡಿದೆ. ಪೊಲೀಸರ ನಿರ್ಲಕ್ಷ್ಯ ಹಾಗೂ ಸೋಮಾರಿತನದಿಂದ ದೇಶದ್ರೋಹಿ ಘೋಷಣೆ ಕೂಗಿದ ಕಾಶ್ಮೀರಿ ವಿದ್ಯಾರ್ಥಿಗಳನ್ನು ನ್ಯಾಯಾಲಯ ಜಾಮೀನಿನ ಮೇಲೆ ಬಿಡುಗಡೆ ಮಾಡಿದೆ ಎಂದು ಯುವ ವಕೀಲರ ಸಂಘದ ಅಧ್ಯಕ್ಷ ಅಶೋಕ್ ಅಣವೇಕರ ಆರೋಪಿಸಿದ್ದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button