ಕಿಮ್ಸ್ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ ವ್ಯಕ್ತಿಯಲ್ಲಿ ಕೊರೊನಾ ಇರಲಿಲ್ಲ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಹುಬ್ಬಳ್ಳಿಯ ಕಿಮ್ಸ್ ಆಸ್ಪತ್ರೆಯಲ್ಲಿ ಅನಾರೋಗ್ಯದಿಂದ ಸಾವನ್ನಪ್ಪಿದ ಎಂಜಿನಿಯರ್ ಸಾವಿಗೆ ಸಾವಿಗೆ ಕೋವಿಡ್ 19 ವೈರಸ್ ಕಾರಣವಲ್ಲ ಎಂದು ಕಿಮ್ಸ್ ನಿರ್ದೇಶಕ ಡಾ.ರಾಮಲಿಂಗಪ್ಪ ಅಂಟರತಾನಿ ಸ್ಪಷ್ಟನೆ ನೀಡಿದ್ದಾರೆ.

ಮಹಾರಾಷ್ಟ್ರದ ಪುಣೆಯಿಂದ ಬಂದಿದ್ದ ಧಾರವಾಡ ಮೂಲದ ಎಂಜಿನಿಯರ್ ಅನಾರೋಗ್ಯದಿಂದ ಕಿಮ್ಸ್ ಗೆ ದಾಖಲಾಗಿದ್ದರು. ಚಿಕಿತ್ಸೆ ಫಲಿಸದೇ ನಿನ್ನೆ ಮಧ್ಯಾಹ್ನ ಸಾವನ್ನಪ್ಪಿದ್ದರು. ವ್ಯಕ್ತಿ ಕೊರೊನಾದಿಂದ ಸಾವನ್ನಪ್ಪಿದ್ದಾರೆ ಎಂಬ ಸುದ್ದಿ ಹರಡಿತ್ತು. ಈ ಹಿನ್ನಲೆಯಲ್ಲಿ ಸ್ಪಷ್ಟನೆ ನೀಡಿರುವ ಕಿಮ್ಸ್ ವೈದ್ಯರು, ವ್ಯಕ್ತಿಯಲ್ಲಿ ಅತಿಯಾದ ಜಾಂಡಿಸ್ ಹಾಗೂ ಬ್ಲಡ್ ಕ್ಯಾನ್ಸರ್ ನಿಂದ ಬಳಲುತ್ತಿದ್ದರು. ಅವರಲ್ಲಿ ಕೊರೊನಾ ಸೋಂಕು ನೆಗೆಟಿವ್ ಬಂದಿದೆ ಎಂದು ತಿಳಿಸಿದ್ದಾರೆ.

ಧಾರವಾಡದ ದೊಡ್ಡನಾಯಕನಕೊಪ್ಪ ಬಡಾವಣೆಯ ನಿವಾಸಿ ರಾಜು ನಾಯಕ್ ಎಂಬವರು ಜ್ವರ ನೆಗಡಿ ಕೆಮ್ಮು ಹಾಗೂ ನ್ಯೂಮೋನಿಯಾದಿಂದ ಬಳಲುತ್ತಿದ್ದರು. ಈ ಹಿನ್ನೆಲೆಯಲ್ಲಿ ಕಿಮ್ಸ್ ಆಸ್ಪತ್ರೆಗೆ ದಾಖಲಾಗಿದ್ದರು. ಮೃತ ವ್ಯಕ್ತಿಯ ರಕ್ತ ಮಾದರಿ ಹಾಗೂ ಗಂಟಲು ದ್ರವ ಶಿವಮೊಗ್ಗಕ್ಕೆ ರವಾನೆ ಮಾಡಲಾಗಿತ್ತು. ವರದಿ ನೆಗೆಟಿವ್ ಬಂದಿದೆ. ಆದರೆ ವ್ಯಕ್ತಿ ಕಾಮಣಿ ರೋಗದಿಂದ ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button