CrimeKannada NewsKarnataka NewsLatest

*ಹಾಡಹಗಲೇ ನಡುರಸ್ತೆಯಲ್ಲಿ ವ್ಯಕ್ತಿಯನ್ನು ಕೊಚ್ಚಿ ಕೊಲೆಗೈದ ದುಷ್ಕರ್ಮಿಗಳು*

ಪ್ರಗತಿವಾಹಿನಿ ಸುದ್ದಿ: ಸ್ಕೂಟಿಯಲ್ಲಿ ತೆರಳುತ್ತಿದ್ದ ವ್ಯಕ್ತಿಯನ್ನು ದುಷ್ಕರ್ಮಿಗಳು ಅಡ್ಡಗಟ್ಟಿ ಹಾಡಹಗಲೇ ನಡುರಸ್ತೆಯಲ್ಲಿ ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿರುವ ಘಟನೆ ನಡೆದಿದೆ.

ಹುಬ್ಬಳ್ಳಿಯ ಲಿಂಗರಾಜನಗರದಲ್ಲಿರುವ ಸಿದ್ದೇಶ್ವರ ಪಾರ್ಕ್ ಬಳಿ ಈ ಘಟನೆ ನಡೆದಿದೆ. ಇಂದು ಮಧ್ಯಾಹ್ನ 1 ಗಂಟೆ ಸುಮಾರಿಗೆ ಈ ಘಟನೆ ನಡೆದಿದೆ. ಜನನಿಬಿಡ ರಸ್ತೆಯಲ್ಲಿ ಸಾರ್ವಜನಿಕರ ಮುಂದೆಯೇ ದುಷ್ಕರ್ಮಿಗಳು ದಾಳಿ ನಡೆಸಿ ವ್ಯಕ್ತಿಯನ್ನು ಬರ್ಬರವಾಗಿ ಹತ್ಯೆಗೈದಿದ್ದಾರೆ.

Home add -Advt

ಕೊಲೆಯಾದವರು ಯಾರು? ಕೊಲೆ ಮಾಡಿದವರು ಯಾರೆಂಬುದು ಇಬ್ನೂ ತಿಳಿದುಬಂದಿಲ್ಲ. ಪೊಲೀಸರು ಸ್ವಯಂ ಪ್ರೇರಿತ ದೂರು ದಾಖಲಿಸಿಕೊಂಡು ಆರೋಪಿಗಳ ಪತ್ತೆಗೆ ಮುಂದಾಗಿದ್ದಾರೆ. ಘಟನಾ ಸ್ಥಳಕ್ಕೆ ಡಿಸಿಪಿ ಶೃತಿ, ಹುಬ್ಬಳ್ಳಿ-ಧಾರವಾಡ ಪೊಲೀಸ್ ಕಮಿಷ್ನರ್ ಶಶಿಕುಮಾರ್ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.


Related Articles

Back to top button