
ಪ್ರಗತಿವಾಹಿನಿ ಸುದ್ದಿ: ಅಂಗನವಾಡಿ ಮಕ್ಕಳಿಗೆ ಪೂರೈಕೆ ಮಾಡುತ್ತಿದ್ದ ಪೌಷ್ಠಿಕ ಆಹಾರಗಳನ್ನು ಅಕ್ರಮವಾಗಿ ಸಂಗ್ರಹಿಸಿ ಕಾಳಸಂತೆಯಲ್ಲಿ ಮಾರಾಟ ಮಾಡುತ್ತಿದ್ದ ಪ್ರಕರಣ ಸಂಬಂಧ 26 ಜನರನ್ನು ಪೊಲೀಸರು ಬಂಧಿಸಿದ್ದಾರೆ.
ಹುಬ್ಬಳ್ಳಿಯ ಕೇಶ್ವಾಪುರ ಪೊಲೀಸರು ಹಾಗೂ ಸಿಸಿಬಿ ಪೊಲೀಸರು ಕಳೆದ ಮೂರು ದಿನಗಳ ಹಿಂದೆ ಜಂಟಿ ಕಾರ್ಯಾಚರಣೆ ನಡೆಸಿ ಗಬ್ಬೂರು ಬಳಿಯ ಗೋದಾಮಿನ ಮೇಲೆ ದಾಳಿ ನಡೆಸಿದ್ದರು. ಕಾಂಗ್ರೆಸ್ ನಾಯಕಿ ಬೈತೂಲ್ಲಾ ಕಿಲ್ಲೇದಾರ್ ಪತಿ ಫಾರುಖ್ ಗೆ ಸೇರಿದ ಗೋದಾಮು ಇದಾಗಿತ್ತು. ದಾಳಿ ವೇಳೆ ಅಪಾರಪ್ರಮಾಣದ ಆಹಾರ ಪದಾರ್ಥಗಳು ಪತ್ತೆಯಾಗಿತ್ತು.
ಇದೀಗ ಈ ಪ್ರಕರಣ ಸಂಬಂಧ ಅಂಗನವಾಡಿ ಸಹಾಯಕರಿಯರು, ಕಾರ್ಯಕರ್ತೆಯರು ಸೇರಿದಂತೆ 26 ಜನರನ್ನು ಬಂದ್ಧಿಸಲಾಗಿದೆ. ಪ್ರಮುಖ ಆರೋಪಿ ಫಾರುಖ್ ನಾಪತ್ತೆಯಾಗಿದ್ದಾನೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ