Latest

ಗ್ರಾಪಂ ಚುನಾವಣೆ ಅಧಿಸೂಚನೆ ಪ್ರಕಟ  

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ :
ಜಿಲ್ಲೆಯ ಬೈಲಹೊಂಗಲ ತಾಲೂಕು ದೊಡವಾಡ ಗ್ರಾಮ ಪಂಚಾಯಿತಿಯ ೨೪ ಸದಸ್ಯ ಸ್ಥಾನಗಳಿಗೆ ಸಾರ್ವತ್ರಿಕ ಚುನಾವಣೆ ನಡೆಸಲು ಜಿಲ್ಲಾಧಿಕಾರಿ ಎಸ್.ಬಿ. ಬೊಮ್ಮನಹಳ್ಳಿ ಅಧಿಸೂಚನೆ ಹೊರಡಿಸಿದ್ದಾರೆ.
        ಫೆ. ೧೮  ರಂದು ಚುನಾವಣೆ ಅಧಿಸೂಚನೆ ಹೊರಡಿಸಲಾಗಿದ್ದು, ಫೆ.೨೧ ರಂದು ನಾಮಪತ್ರ ಸಲ್ಲಿಸಲು ಕೊನೆಯ ದಿನವಾಗಿದೆ. ಫೆ.೨೨ ರಂದು ನಾಮಪತ್ರಗಳನ್ನು ಪರಿಶೀಲಿಸಲಾಗುವುದು. ಫೆ.೨೫ ರಂದು ಉಮೇದುವಾರಿಕೆಗಳನ್ನು ಹಿಂತೆಗೆದುಕೊಳ್ಳಲು ಕೊನೆಯ ದಿನ ಹಾಗೂ ಮಾ.೩ ರಂದು  ಬೆಳಗ್ಗೆ ೭ ರಿಂದ ಸಂಜೆ ೫ ರವರೆಗೆ ಮತದಾನ ನಡೆಯಲಿದೆ. ಮಾ.೫ ರಂದು ಅವಶ್ಯವಿದ್ದರೆ ಮರುಮತದಾನ ನಡೆಸಲಾಗುವದು. ಮಾ. ೬ ರಂದು ಬೆಳಗ್ಗೆ ೮ ರಿಂದ ತಾಲೂಕು ಕೇಂದ್ರ ಸ್ಥಳದಲ್ಲಿ ಮತ ಎಣಿಕೆ ನಡೆಯಲಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button