ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ದೇಶಾದ್ಯಂತ ಕೊರೊನಾ ವೈರಸ್ ಹೆಚ್ಚುತ್ತಿರುವ ಬೆನ್ನಲ್ಲೇ ಪರಿಸ್ಥಿತಿ ನಿಭಾಯಿಸಲು ರೈಲ್ವೆ ಬೋಗಿಗಳನ್ನೇ ಐಸೋಲೇಶನ್ ವಾರ್ಡ್‍ಗಳನ್ನಾಗಿ ಮಾಡಲಾಗುತ್ತಿದೆ. ಇದನ್ನು ನೈಋತ್ಯ ರೈಲ್ವೇ ವಲಯ ಸಹ ಜಾರಿಗೆ ತರುತ್ತಿದ್ದು, ಹುಬ್ಬಳ್ಳಿ ಜಂಕ್ಷನ್‍ನಲ್ಲಿ ಈಗಾಗಲೇ ಹಲವು ರೈಲ್ವೆ ಬೋಗಿಗಳು ಈ ಕಾರ್ಯ ಆರಂಭವಾಗಿದೆ.
ಕೊರೊನಾ ವೈರಸ್ ಹರಡುವಿಕೆಯನ್ನು ನಿಯಂತ್ರಿಸಲು ಕೇಂದ್ರ ಸರ್ಕಾರ ಈ ನಿರ್ಧಾರ ಕೈಗೊಂಡಿದ್ದು, ನೈಋತ್ಯ ರೈಲ್ವೇ ವಲಯದಲ್ಲಿನ ರೈಲು ಬೋಗಿಗಳನ್ನು ಪ್ರತ್ಯೇಕ ವಾರ್ಡ್‍ಗಳಾಗಿ ಪರಿವರ್ತಿಸುವ ಕಾರ್ಯ ಭರದಿಂದ ಸಾಗುತ್ತಿದೆ. ಪ್ರತ್ಯೇಕ ಸೌಲಭ್ಯಗಳಿಗಾಗಿ ದೇಶದ ಸಾಮರ್ಥ್ಯವನ್ನು ಹೆಚ್ಚಿಸುವ ಪ್ರಯತ್ನದಲ್ಲಿ, ರೈಲ್ವೆ ಸ್ಲೀಪರ್ ಕ್ಲಾಸ್ ಬೋಗಿಗಳನ್ನು ಕೋವಿಡ್-19 ಐಸೋಲೇಷನ್ ವಾರ್ಡ್‍ಗಳಾಗಿ ಪರಿವರ್ತಿಸಲಾಗುತ್ತಿದೆ.
ಆರಂಭದಲ್ಲಿ 5,000 ಪ್ರಯಾಣಿಕರ ಬೋಗಿಗಳನ್ನು ಐಸೋಲೇಶನ್ ವಾರ್ಡ್‍ಗಳನ್ನಾಗಿ ಮಾರ್ಪಡಿಸಲು ಯೋಜಿಸಲಾಗಿದೆ. ರೈಲ್ವೇ ಕಾರ್ಮಿಕರು ಐಸೋಲೆಟೆಡ್ ವಾರ್ಡ್ ನಿರ್ಮಾಣಕ್ಕೆ ಶ್ರಮಿಸುತ್ತಿದ್ದಾರೆ. ಅಗತ್ಯಕ್ಕನುಗುಣವಾಗಿ ಕೆಲವು ಕೋವಿಡ್-19 ರೋಗಿಗಳನ್ನು ಈ ಐಸೋಲೇಶನ್ ಭೋಗಿಗಳಲ್ಲಿರಿಸಿ ಚಿಕಿತ್ಸೆ ನೀಡಲಾಗುವುದು. ರೈಲ್ವೆ ಬೋಗಿಗಳಲ್ಲಿ ಎಲ್ಲ ರೀತಿಯ ವ್ಯವಸ್ಥೆ ಕಲ್ಪಿಸಲಾಗಿದ್ದು, ವೈದ್ಯ ಸಿಬ್ಬಂದಿ, ಸೋಂಕಿತರಿಗೆ, ಶಂಕಿತರಿಗೆ ಆಹಾರ ಪೂರೈಕೆಗೂ ಅವಕಾಶ ಕಲ್ಪಿಸಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ