Kannada NewsKarnataka NewsLatest

*ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಲೋಕಾಯುಕ್ತ ಬಲೆಗೆ*

ಪ್ರಗತಿವಾಹಿನಿ ಸುದ್ದಿ: ಲಂಚಕ್ಕೆ ಕೈಯೊಡ್ಡಿದಾಗಲೇ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ರೆಡ್ ಹ್ಯಾಂಡ್ ಆಗಿ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಹುಬ್ಬಳ್ಳಿಯಲ್ಲಿ ಕಮರ್ಷಿಯಲ್ ಟ್ಯಾಕ್ಸ್ ಡಿಸಿ ಭರತ್ ಹೆಗಡೆ ಲೋಕಾಯುಕ್ತ ಬಲೆಗೆ ಬಿದ್ದಿದ್ದಾರೆ. ಲಾರಿ ಹಾಗೂ ಪೆಟ್ರೋಲ್ ಬಂಕ್ ಮಾಲೀಕನಿಗೆ 10 ಲಕ್ಷ ಲಂಚಕ್ಕೆ ಬೇಡಿಕೆ ಇಟ್ಟಿದ್ದರು. ಮುಂಗಡವಾಗಿ 6 ಲಕ್ಷ ರೂಪಾಯಿ ಹಣ ಪಡೆಯುತ್ತಿದ್ದಾಗ ಬೆಂಗಳೂರು ಲೋಕಾಯುಕ್ತ ಅಧಿಕಾರಿಗಳು ದಾಳಿ ನಡೆಸಿ ಭರತ್ ಹೆಗಡೆಯನ್ನು ಬಂಧಿಸಿದ್ದಾರೆ.

ಸದ್ಯ ಭರತ್ ಹೆಗಡೆಯನ್ನು ವಶಕ್ಕೆ ಪಡೆದಿರುವ ಲೋಕಾಯುಕ್ತ ಅಧಿಕಾರಿಗಳು ವಿಚಾರಣೆ ನಡೆಸುತ್ತಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button