
ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ: ಮಹಿಳೆಯೊಬ್ಬರ ವಿಡಿಯೋ, ಫೋಟೋಗಳನ್ನು ಇಟ್ಟುಕೊಂಡು ಬ್ಲ್ಯಾಕ್ ಮೇಲ್ ಮಾಡಿ ಕಿರಾತಕನೊಬ್ಬ ನಿರಂತರವಾಗಿ ಅತ್ಯಾಚಾರವೆಸಗಿರುವ ಘಟನೆ ಹುಬ್ಬಳ್ಳಿಯ ಕಲಗಟಗಿಯಲ್ಲಿ ನಡೆದಿದೆ.
ಕಲಘಟಗಿ ತಾಲೂಕಿನ ದೇವಿಕೊಪ್ಪ ಗ್ರಾಮದಲ್ಲಿ ಸಂತ್ರಸ್ಥ ಮಹಿಳೆ ಮತ್ತು ಆಕೆಯ ಪತಿ ತರಕಾರಿ ವ್ಯಾಪಾರ ಮಾಡಿಕೊಂಡು ಜೀವನ ಸಾಗಿಸುತ್ತಿದ್ದರು. ಅಲ್ಲದೇ ಅದೇ ಊರಿನ ಮೌಲಾಸಾಬ ಹುಲಗೂರ ಎಂಬುವವರ ವಾಹನ ಚಲಾಯಿಸುವ ಕೆಲಸವನ್ನೂ ಮಹಿಳೆಯ ಪತಿ ಮಾಡುತ್ತಿದ್ದರು. ಮಹಿಳೆಯ ಪತಿ ಬೇರೆ ಊರುಗಳಿಗೆ ಹೋಗುತ್ತಿದ್ದಂತೆ ಮೌಲಾಸಾಬ ಮಹಿಳೆಯನ್ನು ಬೆದರಿಸಿ, ಬ್ಲಾಕ್ ಮೇಲ್ ಮಾಡಿ ನಿರಂತರ ಅತ್ಯಾಚಾರವೆಸಗಿದ್ದಾನೆ ಎಂದು ಆರೋಪಿಸಲಾಗಿದೆ.
ಎರಡು ತಿಂಗಳಿಂದ ಮೌಲಾಸಾಬ ಅತ್ಯಾಚಾರವೆಸಗುತ್ತಿದ್ದು, ವಿಷಯ ಬಾಯ್ಬಿಟ್ಟರೆ ಗಂಡ ಹಾಗೂ ಮಕ್ಕಳನ್ನು ಹತ್ಯೆಗೈಯ್ಯುವುದಾಗಿ ಬೆದರಿಸಿದ್ದಾನೆ. ಅಲ್ಲದೇ ಫೋಟೋ, ವಿಡಿಯೋಗಳನ್ನು ತೆಗೆದು ಬ್ಲಾಕ್ ಮೇಲ್ ಮಾಡುತ್ತಿದ್ದಾನೆ. ಈ ಬಗ್ಗೆ ಕಲಘಟಗಿ ಹಾಗೂ ಧಾರವಾಡ ಪೊಲೀಸ್ ಠಾಣೆಗೆ ದೂರು ನೀಡಿದರೂ ಪೊಲೀಸರು ಆರೋಪಿಯನ್ನು ಬಂಧಿಸಿ ಕ್ರಮ ಕೈಗೊಂಡಿಲ್ಲ ಎಂದು ಸಂತ್ರಸ್ತೆ ಕಣ್ಣೀರಿಟ್ಟಿದ್ದಾರೆ.
ರೋಹಿಣಿ ಸಿಂಧೂರಿ ವಿರುದ್ಧ ತನಿಖೆಗೆ ಆದೇಶ: ಎನ್.ಜಯರಾಮ್ ತನಿಖಾಧಿಕಾರಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ