Belagavi NewsBelgaum NewsKannada NewsKarnataka News

*ಸಂಕೇಶ್ವರ ನಿಲಗಾರ ಗಣಪತಿ ದರ್ಶನಕ್ಕೆ ಭಾರೀ ನೂಕುನುಗ್ಗಲು: ಸ್ವಲ್ಪದರಲ್ಲೇ ತಪ್ಪಿದ ಅನಾಹುತ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಬೆಳಗಾವಿ ಜಿಲ್ಲೆಯ ಹುಕ್ಕೇರಿ ತಾಲೂಕಿನ ಸಂಕೇಶ್ವರ ಪಟ್ಟಣದ ಪ್ರಸಿದ್ಧ ನಿಲಗಾರ ಗಣಪತಿ ದರ್ಶನಕ್ಕೆ ಭಾನುವಾರ ಸಾವಿರಾರು ಭಕ್ತರು ಆಗಮಿಸಿದ್ದರು. ಭಕ್ತರ ಸಂಖ್ಯೆ ಹೆಚ್ಚಾದ ಹಿನ್ನೆಲೆಯಲ್ಲಿ ಮಹಾಲಕ್ಷ್ಮಿ ದೇವಸ್ಥಾನದ ಸಮೀಪ ದರ್ಶನಕ್ಕಾಗಿ ನಿರ್ಮಿಸಿದ್ದ ಸರತಿ ಸಾಲಿನಲ್ಲಿ ಏಕಾಏಕಿ ನೂಕುನುಗ್ಗಲು ಉಂಟಾಗಿ, ಕೆಲಕಾಲ ಕಾಲ್ತುಳಿತದಂತಹ ಪರಿಸ್ಥಿತಿ ನಿರ್ಮಾಣವಾಯಿತು.

ನೂಕುನುಗ್ಗಲಿನಿಂದ ಮಹಿಳೆಯರು ಸೇರಿದಂತೆ ಭಕ್ತರಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿತ್ತು. ಭಾರೀ ಸಂಖ್ಯೆಯಲ್ಲಿ ಭಕ್ತರು ಒಂದೇ ವೇಳೆ ಆಗಮಿಸಿದ್ದರಿಂದ ನೂಕಾಟ ತಳ್ಳಾಟ ನಡೆದು ಗೊಂದಲದ ವಾತಾವರಣ ನಿರ್ಮಾಣವಾಯಿತು.

ಅದೃಷ್ಟವಶಾತ್ ಯಾವುದೇ ದೊಡ್ಡ ಅನಾಹುತ ಸಂಭವಿಸದೆ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದ್ದು, ಭಕ್ತರಿಗೆ ಹೆಚ್ಚಿನ ಅಪಾಯ ತಪ್ಪಿದಂತಾಗಿದೆ. ಘಟನೆಯ ಹಿನ್ನೆಲೆಯಲ್ಲಿ ನಿಲಗಾರ ಗಣಪತಿ ಆಡಳಿತ ಮಂಡಳಿ ಹಾಗೂ ಸಂಬಂಧಿತ ಅಧಿಕಾರಿಗಳು ಭಕ್ತರ ಸಂಖ್ಯೆ ಹೆಚ್ಚಾಗುವ ದಿನಗಳಲ್ಲಿ ಸೂಕ್ತ ವ್ಯವಸ್ಥೆ, ಭದ್ರತೆ ಹಾಗೂ ಜನದಟ್ಟಣೆ ನಿಯಂತ್ರಣಕ್ಕೆ ಹೆಚ್ಚಿನ ಮುನ್ನೆಚ್ಚರಿಕೆ ಕ್ರಮ ಕೈಗೊಳ್ಳಬೇಕಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button