Kannada NewsLatestNational
*ಗೃಹ ಬಳಕೆಯ ಅಡುಗೆ ಅನಿಲ ಬೆಲೆಯಲ್ಲಿ ಭಾರಿ ಏರಿಕೆ*

ಪ್ರಗತಿವಾಹಿನಿ ಸುದ್ದಿ: ಗೃಹ ಬಳಕೆಯ ಅಡುಗೆ ಅನಿಲ (LPG) ಸಿಲಿಂಡರ್ ಬೆಲೆಯನ್ನು ತೈಲ ಕಂಪನಿಗಳು ಮತ್ತೆ ಹೆಚ್ಚಳ ಮಾಡಿದ್ದು, ಗ್ರಾಹಕರ ಜೇಬಿಗೆ ಕತ್ತರಿ ಬಿದ್ದಿದೆ.
ಪ್ರತಿ 14.2 ಕೆಜಿ ತೂಕದ ಗೃಹಬಳಕೆಯ ಸಿಲಿಂಡರ್ ಬೆಲೆಯಲ್ಲಿ ಈಗ 29 ರೂಪಾಯಿ ಏರಿಕೆ ಮಾಡಲಾಗಿದ್ದು, ಪರಿಷ್ಕೃತ ದರಗಳು ಈಗಾಗಲೇ ಜಾರಿಗೆ ಬಂದಿವೆ.
ಕಳೆದ ಮೂರು ತಿಂಗಳ ಅವಧಿಯಲ್ಲಿ ಅಡುಗೆ ಅನಿಲ ದರ ಹೆಚ್ಚಳವಾಗಿರುವುದು ಇದು ಎರಡನೇ ಬಾರಿಯಾಗಿದ್ದು ಗೃಹಿಣಿಯರ ಬಜೆಟ್ ಏರುಪೇರಾಗುವಂತೆ ಮಾಡಿದೆ.
ಈ ಹೊಸ ದರ ಏರಿಕೆಯ ನಂತರ ದೇಶದ ರಾಜಧಾನಿ ದೆಹಲಿಯಲ್ಲಿ ಮನೆಬಳಕೆಯ ಸಿಲಿಂಡರ್ ಬೆಲೆ 913 ರೂಪಾಯಿಯಿಂದ 942 ರೂಪಾಯಿಗೆ ತಲುಪಿದೆ. ಸ್ಥಳೀಯ ತೆರಿಗೆಗಳು ಮತ್ತು ಸಾರಿಗೆ ವೆಚ್ಚಗಳ ಆಧಾರದ ಮೇಲೆ ದೇಶದ ಬೇರೆ ಬೇರೆ ನಗರಗಳಲ್ಲಿ ಈ ದರದಲ್ಲಿ ಕೊಂಚ ವ್ಯತ್ಯಾಸ ಇರಲಿದೆ. ಇದಕ್ಕೂ ಮುನ್ನ ಕಳೆದ ಮಾರ್ಚ್ ತಿಂಗಳ ಆರಂಭದಲ್ಲಿ ತೈಲ ಕಂಪನಿಗಳು ಪ್ರತಿ ಸಿಲಿಂಡರ್ ಮೇಲೆ ಭರ್ಜರಿ 60 ರೂಪಾಯಿ ಹೆಚ್ಚಳ ಮಾಡಿದ್ದವು.



