Kannada NewsKarnataka NewsLatest

*ಭಾರಿ ಮಳೆ ಎಚ್ಚರಿಕೆ: ಈ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಣೆ*

ಶಾಲೆ-ಕಾಲೇಜುಗಳಿಗೂ ರಜೆ

Home add -Advt


ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ಮುಂಗಾರು ಮಳೆ ಚುರುಕುಗೊಂಡಿದ್ದು, ಹಲವು ಜಿಲ್ಲೆಗಳಲ್ಲಿ ಧಾರಾಕಾರ ಮಳೆಗೆ ಜನಜೀವನ ಅಸ್ತವ್ಯಸ್ಥಗೊಂಡಿದೆ. ಈ ನಡುವೆ ಹವಾಮಾನ ಇಲಾಖೆ ಭಾರಿ ಮಳೆ ಎಚ್ಚರಿಕೆ ನೀಡಿದ್ದು, ಕೆಲ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಿದೆ.

ಕೊಡಗು, ಕರಾವಳಿ ಜಿಲ್ಲೆಗಳಲ್ಲಿ ವರುಣಾರ್ಭಟ ಮತ್ತಷ್ಟು ಹೆಚ್ಚಲಿದ್ದು, ಕೊಡಗು, ಉಡುಪಿ, ದಕ್ಷಿಣ ಕನ್ನಡ, ಉತ್ತರ ಕನ್ನಡ ಜಿಲ್ಲೆಗಳಿಗೆ ರೆಡ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಮೈಸೂರು, ಚಾಮರಾಜನಗರ ಜಿಲ್ಲೆಗಳಲ್ಲಿಯೂ ಭಾರಿ ಮಳೆಯಾಗಲಿದ್ದು, ಆರೇಂಜ್ ಅಲರ್ಟ್ ಘೋಷಿಸಲಾಗಿದೆ. ಚಿಕ್ಕಮಗಲುರು ಜಿಲ್ಲೆಗೆ ಐದು ದಿನಗಳ ಕಾಲ ಆರೇಂಜ್ ಅಲರ್ಟ್ ಘೋಷಿಸಲಾಗಿದೆ.

ಬೆಂಗಳೂರು ನಗರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ರಾಮನಗರ, ಮಂಡ್ಯ, ಕೋಲಾರ, ಬೀದರ್, ಕಲಬುರಗಿ, ರಾಯಚೂರು, ಯಾದಗಿರಿ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.

ಬೆಳಗಾವಿ, ಧಾರವಾಡ, ಗದಗ, ಚಿತ್ರದುರ್ಗ, ದಾವಣಗೆರೆ, ತುಮಕೂರು, ಕೊಪ್ಪಳ, ಹಾವೇರಿ, ವಿಜಯಪುರ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗಲಿದೆ.

ಭಾರಿ ಮಳೆ ಹಿನ್ನೆಲೆಯಲ್ಲಿ ಕೊಡಗು ಹಾಗೂ ದಕ್ಷಿಣ ಕನ್ನಡದ ಮಂಗಳೂರು ಬಂಟ್ವಾಳಗಳಲ್ಲಿ ಅಂಗನವಾಡಿ, ಶಾಲೆ-ಕಾಲೇಜುಗಳಿಗೆ ಇಂದು ರಜೆ ಘೋಷಿಸಲಾಗಿದೆ.

Related Articles

Back to top button