Kannada NewsKarnataka NewsLatest
*ಮತ್ತೊಂದು ಭೀಕರ ಅಪಘಾತ: ಮೂವರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಮತ್ತೊಂದು ಭೀಕರ ಅಪಘಾತ ಸಂಭವಿಸಿದೆ. ನಿಂತಿದ್ದ ಈಚರ್ ವಾಹನಕ್ಕೆ ಗೂಡ್ಸ್ ಆಟೋ ಡಿಕ್ಕಿಯಾಗಿ ಮೂವರು ಮೃತಪಟ್ಟಿದ್ದಾರೆ.
ಬೆಂಗಳೂರಿನ ಕೆ.ಆರ್.ಪುರಂ ಸಂಚಾರ ಠಾಣಾ ವ್ಯಾಪ್ತಿಯ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಈ ಅಪಘಾತ ಸಂಭವಿಸಿದೆ. ಅಪಘಾತದ ತೀವ್ರತೆಗೆ ಗೂಡ್ಸ್ ಆಟೋದಲ್ಲಿದ್ದ ಮಣಿಕಂಠ, ಸುರೇಶ್, ಶ್ರೀನಿವಾಸ್ ಸಾವನ್ನಪ್ಪಿದ್ದಾರೆ.
ಮೃತರು ವೈಟ್ ಫೀಲ್ಡ್ ಮೂಲದವರು ಎಂದು ತಿಳಿದುಬಂದಿದೆ. ಕೋಲಾರದಿಂದ ಬೆಂಗಳೂರಿಗೆ ಆಲೂಗಡ್ಡೆ ತುಂಬಿಸಿಕೊಂಡು ಬರುತ್ತಿದ್ದ ಕ್ಯಾಂಟರ್ ಮೇಡಹಳ್ಳಿ ಮೇಲ್ಸೇತುವೆ ಮೇಲೆ ಟೈರ್ ಬ್ಲ್ಯಾಸ್ಟ್ ಆಗಿ ನಿಂತಿತ್ತು. ರಸ್ತೆ ಬದಿ ಕ್ಯಾಂಟರ್ ನಿಲ್ಲಿಸಿ ಚಾಲಕ ಟೈರ್ ಚೇಂಜ್ ಮಾಡುತ್ತಿದ್ದ. ಇದೇ ವೇಳೆ ನಿಂತಿದ್ದ ಕ್ಯಾಂಟರ್ಗೆ ಹಿಂದಿನಿಂದ ಬಂದ ಗೂಡ್ಸ್ ಆಟೋ ಡಿಕ್ಕಿಯಾಗಿ ಈ ದುರಂತ ಸಂಭವಿಸಿದೆ.
ಘಟನಾ ಸ್ಥಳಕ್ಕೆ ಡಿಸಿಪಿ ನೇಮಗೌಡ ಮತ್ತು ಕೆ.ಆರ್.ಪುರಂ ಸಂಚಾರಿ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.




