Belagavi NewsBelgaum NewsKannada NewsKarnataka NewsLatest

*ಬೆಳಗಾವಿ ಹುಕ್ಕೇರಿ ಹಿರೇಮಠ ಸಂಸ್ಥಾನಕ್ಕೆ ಮಿಲಿಂದಜಿ ಪರಾಂಡೆ*

ಪ್ರಗತಿವಾಹಿನಿ ಸುದ್ದಿ: ಬೆಳಗಾವಿ: ನಗರದ ಲಕ್ಷ್ಮೀ ಟೇಕಡಿಯಲ್ಲಿರುವ ಹುಕ್ಕೇರಿ ಹಿರೇಮಠ ಸಂಸ್ಥಾನಕ್ಕೆ ಅಖಿಲ ಭಾರತ ವಿಶ್ವ ಹಿಂದೂ ಪರಿಷತ್ತಿನ ಪ್ರಧಾನ ಕಾರ್ಯದರ್ಶಿ ಮಿಲಿಂದಜಿ ಪರಾಂಡೆ ಅವರು 13.7.2026 ಸೋಮವಾರ ಬೆಳಗ್ಗೆ 10ಗಂಟೆಗೆ ಭೇಟಿ ನೀಡಿ ಸಂತರೊಂದಿಗೆ ಚರ್ಚೆ ಕಾರ್ಯಕ್ರಮದಲ್ಲಿ ಭಾಗಿಯಾಗಲಿದ್ದಾರೆ.

ಶ್ರೀಮಠದ ಅಧಿಪತಿಗಳು, ಅಖಿಲ ಭಾರತ ವೀರಶೈವ ಶಿವಾಚಾರ್ಯ ಸಂಸ್ಥೆಯ ರಾಷ್ಟ್ರೀಯ ಉಪಾಧ್ಯಕ್ಷರು ಆದ ಶ್ರೀ. ಚಂದ್ರಶೇಖರ ಶಿವಾಚಾರ್ಯ ಸ್ವಾಮೀಜಿ ನೇತೃತ್ವದಲ್ಲಿ ಜರುಗುವ ಸಂತರ ಸಭೆಯಲ್ಲಿ ಕೂಡಲಸಂಗಮ, ಬೆಳಗಾವಿ ಕಾರಂಜಿಮಠ, ಕೊಣ್ಣುರು ಮರಡಿಮಠ, ಬಾಗೋಜಿಕೊಪ್ಪ ಸೇರಿದಂತೆ ಹಲವಾರು ಜನ ಸ್ವಾಮೀಜಿ ಭಾಗವಹಿಸಲಿದ್ದಾರೆ ಎಂದು ಶ್ರೀಮಠ ಪ್ರಕಟಣೆಯಲ್ಲಿ ತಿಳಿಸಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button