
ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ ಅವರು ಭಾನುವಾರ ಹುಬ್ಬಳ್ಳಿ-ಧಾರವಾಡ ಜಿಲ್ಲೆಯ ನವಲಗುಂದದ ಶ್ರೀ ಹುರಕಡ್ಲಿ ಅಜ್ಜನವರ ಮಠಕ್ಕೆ ಭೇಟಿ ನೀಡಿ, ಅಜ್ಜನವರ ದರ್ಶನ ಆಶೀರ್ವಾದ ಪಡೆದರು.

ಇದೇ ವೇಳೆ ಮಠದ ಸಮಿತಿಯ ಸದಸ್ಯರೊಂದಿಗೆ ಸಭೆ ನಡೆಸಿ, ಮಠದ ಅಭಿವೃದ್ಧಿಯ ಕುರಿತು ಸಮಾಲೋಚನೆ ನಡೆಸಿದರು. ಕಾಂಗ್ರೆಸ್ ಮುಖಂಡ ರಜತ್ ಉಳ್ಳಾಗಡ್ಡಿಮಠ ಉಪಸ್ಥಿತರಿದ್ದರು.