
ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ನ್ಯಾಯಾಲಯದ ಆವರಣದಲ್ಲಿಯೇ ಪತ್ನಿಗೆ ಚಾಕುವಿನಿಂದ ಇರಿದು ಹತ್ಯೆಗೆ ಯತ್ನಿಸಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ದಾವಣಗೆರೆ ನಗರದ ಕೌಟುಂಬಿಕ ಕೋರ್ಟ್ ಆವರಣದಲ್ಲಿ ಈ ಘಟನೆ ನಡೆದಿದೆ. ಪವಿತ್ರಾ ಪತಿಯಿಂದ ಹಲ್ಲೆಗೊಳಗಾದ ಮಹಿಳೆ. ಪ್ರವೀಣ್ ಪತ್ನಿಗೆ ಚಾಕು ಇರಿದ ಪತಿ.
ಕೆಲ ವರ್ಷಗಳ ಹಿಂದೆ ಪ್ರವೀಣ್ ಹಾಗೂ ಪವಿತ್ರಾ ಪ್ರೀತಿಸಿ ವಿವಾಹವಾಗಿದ್ದರು. ಕೌಟುಂಬಿಕ ಜಗಳ ಕೋರ್ಟ್ ಮೆಟ್ಟಿಲೇರಿತ್ತು. ಇಂದು ವಿಚಾರಣೆಗೆ ನ್ಯಾಯಾಲಯಕ್ಕೆ ಬಂದಿದ್ದ ವೇಳೆ ಪತಿ ಪ್ರವೀಣ್, ಪತ್ನಿ ಪವಿತ್ರಾಳಿಗೆ ಚಾಕುವಿನಿಂದ ಇರಿದಿದ್ದಾನೆ. ಬಳಿಕ ತಾನೂ ಕೈಗೆ ಇರಿದುಕೊಂಡಿದ್ದಾನೆ.
ಸದ್ಯ ಇಬ್ಬರನ್ನೂ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿದೆ.