Kannada NewsKarnataka News
ಭೀಕರ ಅಪಘಾತದಲ್ಲಿ ಸ್ಥಳದಲ್ಲೆ ಪತಿ ಸಾವು: ಪತ್ನಿಯ ಎರಡು ಕಾಲು ಕಟ್

ಪ್ರಗತಿವಾಹಿನಿ ಸುದ್ದಿ: ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬೊಮ್ಮಸಂದ್ರ ಫೈ ಓವರ್ ನಲ್ಲಿ ಅತಿ ವೇಗವಾಗಿ ಬರುತ್ತಿದ್ದ ಲಾರಿಯೊಂದು ದಂಪತಿ ಪ್ರಯಾಣಿಸುತ್ತಿದ್ದ ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ ಪತಿ ಸ್ಥಳದಲ್ಲೇ ಮೃತಪಟ್ಟಿದ್ದು, ಪತ್ನಿಯ ಎರಡೂ ಕಾಲು ಕಟ್ ಆದ ಘಟನೆ ನಡೆದಿದೆ.
ಬೈಕ್ ನಲ್ಲಿ ಮಗುವಿನೊಂದಿಗೆ ಗಂಡ- ಹೆಂಡತಿ ಪ್ರಯಾಣ ಬೆಳೆಸಿದ್ದರು. ಬೆಂಗಳೂರು ಕಡೆಯಿಂದ ಬೈಕ್ ಬರ್ತಿತ್ತು. ಹಿಂಬದಿಯಿಂದ ವೇಗವಾಗಿ ಬರುತ್ತಿದ್ದ ಲಾರಿ, ಬೈಕ್ ಗೆ ಡಿಕ್ಕಿ ಹೊಡೆದಿದೆ. ಆ ವೇಳೆ ಕೆಳಗೆ ಬಿದ್ದ ಗಂಡ ಸ್ಥಳದಲ್ಲಿಯೇ ಮೃತಪಟ್ಟಿದ್ದು, ಪತ್ನಿಯ ಎರಡೂ ಕಾಲು ಕಟ್ ಆಗಿದೆ. ಮಹಿಳೆಗೆ ಸ್ಥಳೀಯ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
ಬೆಂಗಳೂರು- ಹೊಸೂರು ಹೆದ್ದಾರಿಯಲ್ಲಿ ಈ ಭೀಕರ ರಸ್ತೆ ಅಪಘಾತದಿಂದಾಗಿ ಕಿಲೋಮೀಟರ್ ಗಟ್ಟಲೆ ಟ್ರಾಫಿಕ್ ಜಾಮ್ ಆಗಿತ್ತು. ಈ ಸಂಬಂಧ ಹೆಬ್ಬಗೋಡಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.




