ಪ್ರಗತಿವಾಹಿನಿ ಸುದ್ದಿ: ಪೊಲೀಸ್ ಹೆಂಡತಿಯನ್ನು ಪತಿಯೇ ಬರ್ಬರವಾಗಿ ಕೊಂದಿರುವ ಆಘಾತಕಾರಿ ಘಟನೆ ಕೇರಳದ ಕಣ್ಣೂರು ಜಿಲ್ಲೆಯಲ್ಲಿ ನಡೆದಿದೆ.
ಮೃತ ಮಹಿಳಾ ಪೊಲೀಸ್ ಅಧಿಕಾರಿಯನ್ನು ದಿವ್ಯಶ್ರೀ ಎಂದು ಗುರುತಿಸಲಾಗಿದೆ. ಅವರು ಕಾಸರಗೋಡು ಜಿಲ್ಲೆಯ ಚಂದೇರಾ ಪೊಲೀಸ್ ಠಾಣೆಯಲ್ಲಿ ಸಿವಿಲ್ ಪೊಲೀಸ್ ಅಧಿಕಾರಿ (ಸಿಪಿಒ) ಆಗಿದ್ದರು. ಕೌಟುಂಬಿಕ ಕಲಹದಿಂದ ದಿವ್ಯಶ್ರೀ ಮತ್ತು ಆಕೆಯ ಪತಿ ರಾಜೇಶ್ ಬೇರ್ಪಟ್ಟಿದ್ದು, ಆಕೆ ತನ್ನ ಪೋಷಕರ ಮನೆಯಲ್ಲಿ ವಾಸಿಸುತ್ತಿದ್ದಳು ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸರ ಪ್ರಕಾರ, ರಾಜೇಶ್ ಗುರುವಾರ ಸಂಜೆ 5:45 ರ ಸುಮಾರಿಗೆ ಆಕೆಯ ಮನೆಗೆ ಹೋಗಿ ಆಕೆಯ ಮೇಲೆ ಹಲ್ಲೆ ಮಾಡಲು ಪ್ರಾರಂಭಿಸಿದ್ದಾನೆ. ಅಲ್ಲದೇ ಆಕೆಯ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ. ದಿವ್ಯಶ್ರೀ ಮೇಲೆ ರಾಜೇಶ್ ಹಲ್ಲೆ ಮಾಡುತ್ತಿರುವುದನ್ನು ತಡೆಯಲು ಯತ್ನಿಸಿದ ದಿವ್ಯಶ್ರೀ ತಂದೆ ವಾಸು ಅವರಿಗೂ ಗಂಭೀರ ಗಾಯಗಳಾಗಿವೆ.
ಬಳಿಕ ದಿವ್ಯಶ್ರೀ ಮತ್ತು ವಾಸು ಇಬ್ಬರನ್ನೂ ಆಸ್ಪತ್ರೆಗೆ ಸಾಗಿಸಲಾಯಿತಾದರೂ ಮಾರ್ಗಮಧ್ಯೆ ದಿವ್ಯಶ್ರೀ ಮೃತಪಟ್ಟಿದ್ದಾರೆ. ಗಂಭೀರವಾಗಿ ಗಾಯಗೊಂಡಿರುವ ವಾಸು ಅವರು ಪರಿಯಾರಂ ಸರ್ಕಾರಿ ವೈದ್ಯಕೀಯ ಕಾಲೇಜು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದುಕೊಳ್ಳುತ್ತಿದ್ದಾರೆ.
ದಾಳಿಯ ಬಳಿಕ ಅಪರಾಧ ಸ್ಥಳದಿಂದ ಪರಾರಿಯಾಗಿದ್ದ ರಾಜೇಶ್‌ನನ್ನು ಕಣ್ಣೂರು ಪಟ್ಟಣದಿಂದ ಪೊಲೀಸರು ವಶಕ್ಕೆ ಪಡೆದುಕೊಂಡಿದ್ದಾರೆ. ಪಯ್ಯನೂರು ಪೊಲೀಸ್ ಠಾಣೆಯಲ್ಲಿ ರಾಜೇಶ್‌ನ ವಿಚಾರಣೆ ನಡೆಸಲಾಗುತ್ತಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ