Kannada NewsKarnataka NewsNational

*ಹೆಂಡತಿ ಹತ್ಯೆ ಮಾಡಿ ತಾನು ಆತ್ಮಹತ್ಯೆ ಮಾಡಿಕೊಂಡ ಪತಿ*

ಪ್ರಗತಿವಾಹಿನಿ ಸುದ್ದಿ: ಡಂಬಲ್ಸ್ ನಿಂದ ಹೆಂಡತಿಯ ತಲೆಗೆ ಹೊಡೆದು ಹತ್ಯೆ ಮಾಡಿದ ಪತಿ ಬಳಿಕ ತಾನು ನೇಣಿಗೆ ಶರಣಾಗಿರುವ ಘಟನೆ ನಡೆದಿದೆ.‌

ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೇವನಹಳ್ಳಿಯ ವಿಜಯಪುರದಲ್ಲಿ ಈ ಘಟನೆ ನಡೆದಿದೆ. ಶಾಮಣ್ಣ (40) ಮತ್ತು ಸುಮಾ (35) ಮೃತರು.

ಇಬ್ಬರ ನಡುವೆ ಕೌಟುಂಬಿಕ ಕಾರಣಗಳಿಂದಾಗಿ ಹಲವು ದಿನಗಳಿಂದ ಜಗಳ ನಡೆಯುತ್ತಿತ್ತು. ಇದೇ ಕಾರಣದಿಂದ ಹತ್ಯೆ ನಡೆದಿರಬಹುದೆಂದು ಊಹಿಸಲಾಗಿದೆ. ದಂಪತಿಗೆ ಇಬ್ಬರು ಮಕ್ಕಳಿದ್ದು ಮಕ್ಕಳು ಶಾಲೆಯಿಂದ ಮನೆಗೆ ಬಂದಾಗ ಈ ಘಟನೆ ಬೆಳಕಿಗೆ ಬಂದಿದೆ.

ಗ್ರಾಮಾಂತರ ಜಿಲ್ಲೆ ಎಸ್‌ಪಿ ಸಿ.ಕೆ. ಬಾಬಾ ಹಾಗೂ ವಿಜಯನಗರ ಠಾಣೆಯ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಶವಗಳನ್ನು ಮರಣೋತ್ತರ ಪರೀಕ್ಷೆಗೆ ರವಾನಿಸಿದ್ದಾರೆ. ಪ್ರಕರಣದ ಕುರಿತು ದೂರು ದಾಖಲಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button