ಪ್ರಗತಿವಾಹಿನಿ ಸುದ್ದಿ; ಹಾಸನ: ಪ್ರೀತಿಸಿ ವಿವಾಹವಾಗಿದ್ದ ಪತ್ನಿಯನ್ನೇ ಪತಿಮಹಾಶಯ ಸಂಶಯದಿಂದ ಕೊಲೆ ಮಾಡಲು ಯತ್ನಿಸಿದ ಘಟನೆ ಹಾಸನ ಜಿಲ್ಲೆ ಸಕಲೇಶಪುರ ತಾಲೂಕಿನ ಮರಡಿಕೆರಿ ಗ್ರಾಮದಲ್ಲಿ ನಡೆದಿದೆ.
ಮರಡಿಕೆರಿ ಗ್ರಾಮದ ಸತೀಶ್, 5 ವರ್ಷಗಳ ಹಿಂದೆ ಭವ್ಯಾ ಎಂಬುವವಳನ್ನು ಪ್ರೀತಿಸಿ ವಿವಾಹವಾಗಿದ್ದ. ಆದರೆ ಪತ್ನಿ ಮೇಲಿನ ಅನುಮಾನಕ್ಕೆ ಆಕೆ ಮಲಗಿದ್ದ ವೇಳೆ ಸೀಮೆಎಣ್ಣೆ ಸುರಿದು ಬೆಂಕಿ ಹಚ್ಚಿ ಹತ್ಯೆ ಮಾಡಲು ಯತ್ನಿಸಿದ್ದಾನೆ.
ಗಂಭೀರವಾಗಿ ಸುಟ್ಟಗಾಯಗಳಿಂದ ಬಳಲುತ್ತಿರುವ ಭವ್ಯಾರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಭವ್ಯಾ ದೇಹ ಶೇ.70ರಷ್ಟು ಸುಟ್ಟಿದ್ದು, ಸಾವು ಬದುಕಿನ ನಡುವೆ ಹೋರಾಡುತ್ತಿದ್ದಾರೆ.
ಪತ್ನಿ ಮಲಗಿದ್ದಾಗ ಬೆಂಕಿ ಹಚ್ಚಿದ್ದ ಪತಿ, ಪತ್ನಿ ಬದುಕಿಳಿದಿದ್ದು ಗೊತ್ತಾಗುತ್ತಿದ್ದಂತೆಯೆ ಗ್ಯಾಸ್ ಲೀಕ್ ಆಗಿ ಬೆಂಕಿ ಬಿದ್ದಿದದಗಿ ಹೇಳಿಕೆ ನೀಡುವಂತೆ ಬೆದರಿಸಿದ್ದ. ಪತಿ ಬೆದರಿಕೆಗೆ ಅದೇ ರೀತಿ ಹೇಳಿಕೆ ನೀಡಿದ್ದಳು ಭವ್ಯಾ. ಆದರೆ ಅನುಮಾನಗೊಂಡ ಪೊಲೀಸರು, ತನಿಖೆ ನಡೆಸಿದ್ದಾರೆ. ಈ ವೇಳೆ ಪ್ರಕರಣ ಬಯಲಾಗಿದೆ.
ಆರೋಪಿ ಸತೀಶನನ್ನು ಸಕಲೇಶಪುರ ಯಸಳೂರು ಠಾಣೆ ಪೊಲೀಸರು ಬಂಧಿಸಿದ್ದಾರೆ.
ಶೇನ್ ವಾರ್ನ್ ಸಾವಿನ ರಹಸ್ಯ ಬಿಚ್ಚಿಟ್ಟ ಪೋಸ್ಟ್ ಮಾರ್ಟಮ್ ರಿಪೋರ್ಟ್
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ