CrimeKarnataka NewsLatest

*8 ತಿಂಗಳ ಗರ್ಭಿಣಿ ಪತ್ನಿಯನ್ನು ಕತ್ತು ಬಿಗಿದು ಹತ್ಯೆಗೆ ಯತ್ನಿಸಿದ ಪತಿ*

ಪ್ರಗತಿವಾಹಿನಿ ಸುದ್ದಿ: ಪತಿಮಹಾಶಯನೊಬ್ಬ 8 ತಿಂಗಳ ಗರ್ಭಿಣಿ ಪತ್ನಿಯನ್ನು ಕುತ್ತಿಗೆ ಬಿಗಿದು ಕೊಲೆ ಯತ್ನ ನಡೆಸಿರುವ ಘಟನೆ ನಡೆದಿದೆ.

ಬೆಂಗಳೂರಿನ ಹೊರವಲಯದ ಹೆಸರಘಟ್ಟದಲ್ಲಿ ಈ ಘಟನೆ ನಡೆದಿದೆ. ಕುತ್ತಿಗೆ ಬಿಗಿದ ಬಳಿಕ ಪತ್ನಿ ಪ್ರಜ್ಞೆ ತಪ್ಪಿ ಬಿದ್ದಿದ್ದರಿಂದ ಮೃತಪಟ್ಟಿದ್ದಾಳೆ ಎಂದು ಭಾವಿಸಿದ ಆರೋಪಿ ಸ್ಥಳದಿಂದ ಪರಾರಿಯಾಗಿದ್ದಾನೆ. ಆದರೆ ಕೆಲ ಗಂಟೆಗಳ ಬಳಿಕ ಮಹಿಳೆಗೆ ಪ್ರಜ್ಞೆ ಬಂದಿದ್ದು, ಕುಟುಂಬಸ್ಥರಿಗೆ ವಿಷಯ ತಿಳಿಸಿದ ನಂತರ ಪ್ರಕರಣ ಬೆಳಕಿಗೆ ಬಂದಿದೆ.

Home add -Advt

35 ವರ್ಷದ ಹಸೀನಾ ಗಾಯಗೊಂಡ ಮಹಿಳೆ. ಆರೋಪಿ ಪತಿ ಮಹಮ್ಮದ್ ಫಿರ್ (40) ಅವರನ್ನು ಪೊಲೀಸರು ಬಂಧಿಸಿದ್ದಾರೆ. ಮಹಮ್ಮದ್ ಫಿರ್ ಮತ್ತು ಹಸೀನಾ ಸುಮಾರು 15 ವರ್ಷಗಳಿಂದ ಪರಸ್ಪರ ಪರಿಚಯ ಹೊಂದಿದ್ದು, ಎರಡು ವರ್ಷಗಳ ಹಿಂದೆ ವಿವಾಹವಾಗಿದ್ದರು. ಆದರೆ ಫಿರ್‌ಗೆ ಮೊದಲೇ ಮದುವೆಯಾಗಿತ್ತು. ಅಲ್ಲದೇ ಮಗು ಬೇಡವೆಂಬ ಕಾರಣಕ್ಕೆ ಈ ಹಿಂದೆ ಎರಡು ಬಾರಿ ಪತ್ನಿಗೆ ಗರ್ಭಪಾತ ಮಾಡಿಸಿದ್ದ. ಹಸೀನಾ ಮತ್ತೆ ಗರ್ಭವತಿಯಾಗಿದ್ದಳು. ಮಗು ಬೇಡವೆಂದು ಪತಿ ಹೇಳುತ್ತಿದ್ದ, ಆದರೆ ಈ ಬಾರಿ ಮಗುವನ್ನು ಕಳೆದುಕೊಳ್ಳಲು ಹಸೀನಾಗೆ ಇಷ್ಟವಿರಲಿಲ್ಲ. ಹಸೀನಾ 8 ತಿಂಗಳ ಗರ್ಭಿಣಿಯಾಗಿದ್ದಳು. ಮಗು ಬೇಡ ಎಂದು ಹೇಳಿದರ್ ಕೇಳಿಲ್ಲ ಎಂಬ ಕಾರಣಕ್ಕೆ ಜಗಳವಾಡಿ ಪತ್ನಿಯ ಕತ್ತು ಬಿಗಿದು ಹತ್ಯೆಗೆ ಯತ್ನಿಸಿದ್ದಾನೆ ಎಂದು ತಿಳಿದುಬಂದಿದೆ.

Related Articles

Back to top button