CrimeKannada NewsKarnataka NewsLatest

*ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆಗೈದ ಪತಿ*

ಪ್ರಗತಿವಾಹಿನಿ ಸುದ್ದಿ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಪತು ಮಹಾಶಯನೊಬ್ಬ ಆಕೆಯನ್ನು ಮಚ್ಚಿನಿಂದ ಕೊಚ್ಚಿ ಬರ್ಬರವಾಗಿ ಹತ್ಯೆ ಮಾಡಿರುವ ಘಟನೆ ನಡೆದಿದೆ.

ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ದಾಸರಹಳ್ಳಿಯಲ್ಲಿ ಈ ಘಟನೆ ನಡೆದಿದೆ. ನಾಗಮ್ಮ (40) ಪತಿಯಿಂದ ಕೊಲೆಯಾದ ಪತ್ನಿ. ಕಣಿ ಮಾದಯ್ಯ ಪತ್ನಿಯನ್ನೇ ಹತ್ಯೆಗೈದ ಪತಿ.

ಕಟ್ಟಿ ಎಂಬಾತನ ಜೊತೆ ನಾಗಮ್ಮ ಅಕ್ರಮ ಸಂಬಂಧ ಹೊಂದಿದ್ದಳು. ಈ ವಿಷಯ ತಿಳಿದ ಕಣಿ ಮಾದಯ್ಯ, ಪತ್ನಿಯನ್ನು ಮಚ್ಚಿನಿಂದ ಕೊಚ್ಚಿ ಕೊಲೆ ಮಾಡಿದ್ದಾನೆ. ಕಟ್ಟಿ ಮೇಲೂ ಹಲ್ಲೆ ನಡೆಸಿದ್ದಾನೆ.

ರಾಮನಗರ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ. ಸ್ಥಳಕ್ಕೆ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button