
ಪ್ರಗತಿವಾಹಿನಿ ಸುದ್ದಿ: ಪತ್ನಿಯನ್ನು ಕೊಲೆ ಮಾಡಿ ಬಳಿಕ ಪತಿ ಕೂಡ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಕೊಪ್ಪಳ ತಾಲೂಕಿನ ಬುಡಶೆಡ್ನಾಳ್ ಗ್ರಾಮದಲ್ಲಿ ನಡೆದಿದೆ.
ಲಕ್ಷ್ಮವ್ವಾ ವಾಲೀಕಾರ್ (40) ಕೊಲೆಯಾದ ಮಹಿಳೆ. ಕುಡಿತದ ಚಟಕ್ಕೆ ದಾಸನಾಗಿದ್ದ ನಿಂಗಪ್ಪ ಹಲವೆಡೆ ಸಾಲ ಮಾಡಿಕೊಂಡಿದ್ದ. ಪ್ರತಿದಿನ ಕುಡಿದು ಬಂದು ಪತ್ನಿ ಜೊತೆ ಜಗಳವಾಡುತ್ತಿದ್ದ.
ಈಗ ಪತ್ನಿ ತಲೆ ಮೇಲೆ ಕಲ್ಲು ಎತ್ತಿಹಾಕಿ ಹತ್ಯೆಗೈದಿರುವ ನಿಂಗಪ್ಪ, ಬಳಿಕ ಗ್ರಾಮದ ಹೊರವಲಯದಲ್ಲಿ ಮರಕ್ಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾನೆ.
ಕೊಪ್ಪಳ ಗ್ರಾಮಿಣ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ