*ಕುಡಿಯುವ ನೀರಿಗೆ ವಿಷ ಬೆರಸಿ ಪತ್ನಿ, ಇಬ್ಬರು ಮಕ್ಕಳ ಹತ್ಯೆಗೈದ ಪತಿ; ಆತ್ಮಹತ್ಯೆಗೆ ಯತ್ನ*

ಪ್ರಗತಿವಾಹಿನಿ ಸುದ್ದಿ: ಪತಿ ಮಹಾಶಯನೊಬ್ಬ ಪತ್ನಿ ಹಾಗೂ ಇಬ್ಬರು ಪುಟ್ಟ ಮಕ್ಕಳನ್ನು ಹತ್ಯೆಗೈದು ಬಳಿಕ ತಾನೂ ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ಮಂಡ್ಯ ಜಿಲ್ಲೆಯ ನಾಗಮಂಗಲ ಪಟ್ಟಣದಲ್ಲಿ ನಡೆದಿದೆ.
ಕುಡಿಯುವ ನೀರಿಗೆ ಕ್ರಿಮಿನಾಶಕ ಬೆರಸಿ ಪತ್ನಿ ಹಾಗೂ ಇಬ್ಬರು ಮಕ್ಕಳಿಗೆ ಕುಡಿಸಿ ಮೂವರನ್ನು ಕೊಲೆಗೈದಿದ್ದಾನೆ. ಬಳಿಕ ತಾನೂ ಅದೇ ನೀರು ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದಾನೆ.
ಕೀರ್ತನಾ (23) ಮಕ್ಕಳಾದ 4 ವರ್ಷದ ಜಯಸಿಂಹ ಹಾಗೂ ಒಂದು ವರ್ಷದ ರಿಷಿಕಾ ಮೃತ ದುರ್ದೈವಿಗಳು. ನರಸಿಂಹ ಹೆಂಡತಿ, ಮಕ್ಕಳನ್ನು ಕೊಂದ ಆರೋಪಿ. ಅಸ್ವಸ್ಥ ನರಸಿಂಹನನ್ನು ನಾಗಮಂಗಲ ತಾಲೂಕು ಆಸ್ಪತ್ರೆಗೆ ದಾಖಲಿಸಲಾಗಿದೆ.
5 ವರ್ಷಗಳ ಹಿಂದೆ ಕೀರ್ತನಾಲನ್ನು ವಿವಾಹವಾಗಿದ್ದ ನರಸಿಂಹ ದಂಪತಿಗೆ ಇಬ್ಬರು ಮಕ್ಕಳು. ಕಟಿಂಗ್ ಶಾಪ್ ಇಟ್ಟುಕೊಂಡು ಜೀವನ ಸಾಗಿಸುತ್ತಿದ್ದ. ಆದರೆ ಪತಿಗೆ ಅಕ್ರಮ ಸಂಬಂಧವಿದೆ ಎಂದು ಪತ್ನಿ ಮನೆಯಲ್ಲಿ ಜಗಳವಾಡುತ್ತಿದ್ದಳು. ಇದರಿಂದ ನೊದು ಪತ್ನಿ ಹಾಗೂ ಮಕ್ಕಳನ್ನು ಕೊಲೆ ಮಾಡಿದ್ದಾನೆ ಎನ್ನಲಾಗಿದೆ.
ನಾಗಮಂಗಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ