![](https://pragativahini.com/wp-content/uploads/2024/04/suicide-.jpg)
ಪ್ರಗತಿವಾಹಿನಿ ಸುದ್ದಿ: ಪತ್ನಿಯ ಅನೈತಿಕ ಸಂಬಂಧಕ್ಕೆ ಬೇಸತ್ತು ಆತ್ಮಹತ್ಯೆಗೆ ಶರಣಾಗುತ್ತಿರುವುದಾಗಿ ಡೆತ್ ನೋಟ್ ಬರೆದಿಟ್ಟು ಪತಿಯೊಬ್ಬ ಆತ್ಮಹತ್ಯೆಗೆ ಶರಣಾಗಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಬಸವರಾಜ್ (27) ಆತ್ಮಹತ್ಯೆಗೆ ಶರಣಾಗಿರುವ ಪತಿ. ಮೈಸೂರು ಮೂಲದ ವ್ಯಕ್ತಿ ಜೊತೆ ಪತ್ನಿ ಅನೈತಿಕ ಸಂಬಂಧ ಹೊಂದಿದ್ದಾಳೆ. ಇದರಿಂದ ನೊಂದು ಆತ್ಮಹತ್ಯೆ ಮಾಡಿಕೊಳ್ಳುತ್ತಿದ್ದೇನೆ. ನನ್ನ ಸಾವಿಗೆ ನನ್ನ ಪತ್ನಿಯೇ ಕಾರಣ. ಆಕೆ ಹಾಗೂ ಆಕೆಯ ಪ್ರಿಯತಮನಿಗೆ ಶಿಕ್ಷೆ ನೀಡಬೇಕು ಎಂದು ಬರೆದಿಟ್ಟಿದ್ದಾರೆ.
ಅಲ್ಲದೇ ನನ್ನ ಮಕ್ಕಳನ್ನು ನನ್ನ ತಾಯಿ ಸಾಕಬೇಕು ಎಂದು ಡೆತ್ ನೋಟ್ ನಲ್ಲಿ ಉಲ್ಲೇಖಿಸಿದ್ದಾರೆ. ದಾವಣಗೆರೆಯ ನಿವಾಸದಲ್ಲಿಯೇ ನೇಣಿಗೆ ಕೊರಳೊಡ್ದಿ ಬಸವರಾಜ್ ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಜಗಳೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ