Karnataka NewsLatest
*ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣು*

ಪ್ರಗತಿವಾಹಿನಿ ಸುದ್ದಿ: ಹೇಮಾವತಿ ಕಾಲುವೆಗೆ ಹಾರಿ ಒಂದೇ ಕುಟುಂಬದ ಮೂವರು ಆತ್ಮಹತ್ಯೆಗೆ ಶರಣಾಗಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ.
ಇಲ್ಲಿನ ಚೆನ್ನಕೆರೆ ಬಳಿ ಈ ದುರಂತ ಸಂಭವಿಸಿದೆ. ಪತ್ನಿ, ಮಗಳೊಂದಿಗೆ ಪತಿ ಹೇಮಾವತಿ ಕಾಲುವೆಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಶ್ರೀನಿವಾಸ್ (43), ಶ್ವೇತಾ (36) ಹಾಗೂ ಮಗಳು ನಾಗಶ್ರೀ (13) ಮೃತ ದುರ್ದೈವಿಗಳು.
ಕಳೆದ ಮಂಗಳವಾರದಿಂದ ಮೂವರು ನಾಪತ್ತೆಯಾಗಿದ್ದರು. ಕುಟುಂಬದವರು ಎಷ್ಟು ಹುಡುಕಾಡಿದರೂ ಪತ್ತೆಯಾಗಿರಲಿಲ್ಲ. ಇದೀಗ ಮೂವರ ಮೃತದೇಹ ಹೇಮಾವತಿ ಕಾಲುವೆಯಲ್ಲಿ ಪತ್ತೆಯಾಗಿದೆ. ಸಾಲಬಾಧೆಯಿಂದ ಆತ್ಮಹತ್ಯೆ ಮಾಡಿಕೊಂಡಿರುವ ಶಂಕೆ ವ್ಯಕ್ತವಾಗಿದೆ.
ಶ್ರೀನಿವಾಸ್ ಕಾರು ಚಾಲಕನಾಗಿದ್ದರು. ಪತ್ನಿ ಶ್ವೇತಾ ಖಾಸಗಿ ಶಾಲೆಯಲ್ಲಿ ಶಿಕ್ಷಕಿಯಾಗಿದ್ದರು. ಇದೀಗ ಪತಿ-ಪತ್ನಿ-ಮಗಳು ಮೂವರು ಸಾವಿಗೆ ಶರಣಾಗಿದ್ದಾರೆ.




