Latest

*ಪತ್ನಿಯನ್ನು ಕೊಚ್ಚಿ ಕೊಲೆಗೈದ ಪತಿ ಎಸ್ಕೇಪ್*

ಪ್ರಗತಿವಾಹಿನಿ ಸುದ್ದಿ; ಮಂಡ್ಯ: ಪತಿಯೇ ಪತ್ನಿಯನ್ನು ಕೊಲೆಗೈದು ಪರಾರೊಯಾಗಿರುವ ಘಟನೆ ಮಂಡ್ಯ ಜಿಲ್ಲೆಯ ಪಾಂಡವಪುರ ತಾಲೂಕಿನ ಅರಳಕುಪ್ಪೆ ಗ್ರಾಮದಲ್ಲಿ ನಡೆದಿದೆ.

ಶೋಭಾ (40) ಗಂಡನಿಂದ ಕೊಲೆಯಾದ ಮಹಿಳೆ. ಮನೋಹರ್ ತನ್ನ ಪನಿ ಶೋಭಾಳನ್ನು ಕುಡಗೋಲಿನಿಂದ ಕೊಚ್ಚಿ ಕೊಲೆಗೈದಿದ್ದಾನೆ ಎಂದು ತಿಳಿದುಬಂದಿದೆ. ಅಕ್ರಮ ಸಂಬಂಧ ಶಂಕೆ ಹಿನ್ನೆಲೆಯಲ್ಲಿ ಕೊಲೆ ನಡೆದಿರಬಹುದು ಎನ್ನಲಾಗಿದೆ.

ನಿನ್ನೆ ತಡರಾತ್ರಿ ಪತಿ-ಪತ್ನಿ ನಡುವೆ ಗಲಾಟೆ ನಡೆದಿದೆ. ಇಂದು ಬೆಳಗಾಗುವಷ್ಟರಲ್ಲಿ ಮನೋಹರ್ ಪತ್ನಿಯನ್ನೇ ಕೊಲೆಗೈದು ಪರಾರಿಯಾಗಿದ್ದಾನೆ. ಕುಡಗೋಲಿನಿಂದ ಪತ್ನಿಯ ಕಾಲು ಕತ್ತರಿಸಿರುವ ಮನೋಹರ್ ಬಳಿಕ ಆಕೆಯ ಕತ್ತಿನ ಭಾಗಕ್ಕೂ ಮಾರಣಾಂತಿಕವಾಗಿ ಹಲ್ಲೆ ಮಾಡಿದ್ದಾನೆ. ತೀವ್ರ ರಕ್ತಸ್ರಾವದಿಂದಾಗಿ ಶೋಭಾ ಸಾವನ್ನಪ್ಪಿದ್ದಾಳೆ.

ಶ್ರೀರಂಗಪಟ್ಟಣದ ಗ್ರಾಮಾಂತರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Home add -Advt

*ರೈಲಿಗೆ ಸಿಲುಕಿ ಇಬ್ಬರು ಮಹಿಳೆಯರ ದುರ್ಮರಣ*

Related Articles

Back to top button