Kannada NewsLatestNational

*ಸಮುದ್ರ ಆಹಾರ ರಫ್ತು ಘಟಕದಲ್ಲಿ ಅನಿಲ ಸೋರಿಕೆ: ಇಬ್ಬರು ಸಾವು: 60ಕ್ಕೂ ಹೆಚ್ಚು ಜನರು ಅಸ್ವಸ್ಥ*

ಪ್ರಗತಿವಾಹಿನಿ ಸುದ್ದಿ: ಸಮುದ್ರ ಆಹಾರ ರಫ್ತು ಘಟಕವೊಂದರಲ್ಲಿ ಅಮೋನಿಯಂ ಅನಿಲ ಸೋರಿಕೆಯಾಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ನಡೆದಿದೆ.

ತಮಿಳುನಾಡಿನ ತಿರುವಳ್ಳೂರ್ ಜಿಲ್ಲೆಯ ಪೆರಿಯಪಾಳಯಂ ಬಳಿಯ ಕನ್ನಿಗೈಪಾರ್​ನಲ್ಲಿನ ಸೇಂಟ್ ಪೀಟರ್ಸ್ ಅಂಡ್ ಪೌಲ್ ಸೀಫುಡ್ಸ್ ಎಕ್ಸ್ಪೋರ್ಟ್ಸ್ ಘಟಕದಲ್ಲಿ ಈ ಘಟನೆ ಸಂಭವಿಸಿದೆ. ತೀವ್ರ ಪ್ರಮಾಣದಲ್ಲಿ ಅಮೋನಿಯಾ ಸೋರಿಕೆಯಾದ್ದರಿಂದ ಘಟಕದಲ್ಲಿದ್ದ 60ಕ್ಕೂ ಹೆಚ್ಚು ಕಾರ್ಮಿಕರು ಅಸ್ವಸ್ಥಗೊಂಡಿದ್ದಾರೆ. ಇವರ ಪೈಕಿ ಹಲವರ ಆರೋಗ್ಯ ಸ್ಥಿತಿ ಗಂಭೀರವಾಗಿದೆ.

Home add -Advt

ಅಸ್ವಸ್ಥರನ್ನು ತಮಿಳುನಾಡಿನ ವಿವಿಧ ಆಸ್ಪತ್ರೆಗಳಿಗೆ ದಾಖಲಿಸಲಗಿದೆ. ತಕ್ಷಣ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ದಳ ಮತ್ತು ರಕ್ಷಣಾ ಸಿಬ್ಬಂದಿ, ಸೋರಿಕೆಯನ್ನು ತಡೆಗಟ್ಟಲು ಪ್ರಯತ್ನಿಸಿದರು. ಘಟಕದಲ್ಲಿ ಸುರಕ್ಷತಾ ನಿಯಮಗಳನ್ನು ಪಾಲಿಸಲಾಗಿದೆಯೇ ಮತ್ತು ಅನಿಲ ಸೋರಿಕೆಗೆ ನಿಖರ ಕಾರಣವೇನು ಎಂಬುದರ ಬಗ್ಗೆ ತನಿಖೆ ನಡೆಯುತ್ತಿದೆ.

Related Articles

Back to top button