
ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ಫಾರ್ಮಸಿ ವಿದ್ಯಾರ್ಥಿನಿಯ ಮೇಲೆ ನಡೆದಿದ್ದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿದಂತೆ ಸಿಸಿಟಿವಿ ದೃಶ್ಯ ಆಧರಿಸಿ ಪೊಲೀಸರು 6 ಆರೋಪಿಗಳನ್ನು ಬಂಧಿಸಿದ್ದಾರೆ.
ಬಂಧಿತರನ್ನು ರಾಜು, ರಮೇಶ್, ಶಿವ, ನಾದಂ, ಭಾಸ್ಕರ, ಕುಮಾರ್ ಎಂದು ಗುರುತಿಸಲಾಗಿದೆ. ಕಾಲೇಜು ತರಗತಿಯನ್ನು ಮುಗಿಸಿ ಆಟೋ ಹತ್ತಿ ಮನೆಗೆ ಹೋಗುತ್ತಿದ್ದ ವಿದ್ಯಾರ್ಥಿನಿಯನ್ನು ಆಟೋ ಚಾಲಕನೇ ಕಿಡ್ನಾಪ್ ಮಾಡಿ ಸ್ನೇಹಿತರ ಜೊತೆ ಓಮ್ನಿ ಕಾರಲ್ಲಿ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ವಿದ್ಯಾರ್ಥಿನಿ ಮೇಲೆ ಹಲ್ಲೆ ನಡೆಸಿ ಗ್ಯಾಂಗ್ ರೇಪ್ ನಡೆಸಿದ್ದರು. ಯುವತಿಯನ್ನು ವಿವಸ್ತ್ರಗೊಳಿಸಿ ಘಟ್ಕೇಸ್ಕರ್ ಬಳಿ ಬಿಟ್ಟು ಆರೋಪಿಗಳು ಪರಾರಿಯಾಗಿದ್ದರು.
ಆರೋಪಿಗಳು ಈ ಹಿಂದೆ ಕೂಡ ಇಂಥದ್ದೇ ಕೃತ್ಯಗಳಲ್ಲಿ ಭಾಗಿಯಾಗಿದ್ದರು ಎಂದು ವಿಚಾರಣೆ ವೇಳೆ ಹೇಳಿಕೆ ನೀಡಿದ್ದಾರೆ ಎಂದು ತಿಳಿದುಬಂದಿದೆ.