Latest

ಮೆಡಿಕಲ್ ವಿದ್ಯಾರ್ಥಿನಿ ಮೇಲೆ ಗ್ಯಾಂಗ್ ರೇಪ್; ವಿವಸ್ತ್ರಗೊಳಿಸಿ ನಿರ್ಜನ ಪ್ರದೇಶದಲ್ಲಿ ಎಸೆದು ಹೋದ ಪಾಪಿಗಳು

ಪ್ರಗತಿವಾಹಿನಿ ಸುದ್ದಿ; ಹೈದರಾಬಾದ್: ದಿಶಾ ಗ್ಯಾಂಗ್ ರೇಪ್ ಪ್ರಕರಣ ಮಾಸುವ ಮುನ್ನವೇ ಹೈದರಾಬಾದ್ ನಲ್ಲಿ ಅಂತದ್ದೇ ಮತ್ತೊಂದು ಪ್ರಕರಣ ಬೆಳಕಿಗೆ ಬಂದಿದೆ. ಮೆಡಿಕಲ್ ಕಾಲೇಜು ವಿದ್ಯಾರ್ಥಿನಿಯ ಮೇಲೆ ಅಟ್ಟಹಾಸ ಮೆರೆದಿರುವ ಕಾಮುಕರು, ಬಳಿಕ ಆಕೆಯ ಮೇಲೆ ಹಲ್ಲೆ ನಡೆಸಿ, ವಿವಸ್ತ್ರಗೊಳಿಸಿ ಯುವತಿಯನ್ನು ನಿರ್ಜನ ಪ್ರದೇಶದಲ್ಲಿ ಬಿಟ್ಟು ಹೋಗಿರುವ ಘಟನೆ ಘಟ್ಕೇಸರ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದೆ.

ಕಾಲೇಜ್ ಬಸ್ ಇಳಿದು ಮನೆಗೆ ತೆರಳಲೆಂದು ಆಟೋ ಹತ್ತಿದ್ದ ಯುವತಿಯನ್ನು ಕೆಲ ದೂರ ತೆರಳುತ್ತಿದ್ದಂತೆಯೇ ಆಟೋ ಚಾಲಕ ವಿದ್ಯಾರ್ಥಿನಿಯನ್ನು ಓಮ್ನಿಗೆ ಶಿಫ್ಟ್ ಮಾಡಿ ಮೂವರು ಸ್ನೇಹಿತರೊಂದಿಗೆ ಸೇರಿ ಗ್ಯಾಂಗ್ ರೇಪ್ ನಡೆಸಿದ್ದಾರೆ.

ಬಳಿಕ ದೊಣ್ಣೆ, ಕಲ್ಲುಗಳಿಂದ ವಿದ್ಯಾರ್ಥಿನಿಯನ್ನು ಹೊಡೆದಿದ್ದಾರೆ. ಅಲ್ಲದೇ ನಿರ್ಜನ ಪ್ರದೇಶಕ್ಕೆ ಕೊಂಡೊಯ್ದು ಆಕೆಯನ್ನು ವಿವಸ್ತ್ರವಾಗಿಸಿ ಅಲ್ಲಿಯೇ ಬಿಟ್ಟು ಪರಾರಿಯಾಗಿದ್ದಾರೆ. ನರಳುತ್ತಾ ಸ್ಥಳೀಯರ ನೆರವು ಪಡೆದ ಯುವತಿ ಪೊಲೀಸ್ ಠಾಣೆಗೆ ದೂರು ನೀಡಿದ್ದಾಳೆ. ಸದ್ಯ ಯುವತಿಯನ್ನು ಖಾಸಗಿ ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನಿಡಲಾಗುತ್ತಿದೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button