National

*ಗುಲ್ಜಾರ್ ಹೌಸ್ ನಲ್ಲಿ ಅಗ್ನಿ ಅವಘಡ: ಸಾವಿನ ಸಂಖ್ಯೆ 17ಕ್ಕೇರಿಕೆ*

ಪ್ರಗತಿವಾಹಿನಿ ಸುದ್ದಿ: ಹೈದರಾಬಾದ್ ನ ಚಾರ್ ಮಿನಾರ್ ಬಳಿಯ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಮತ್ತಷ್ಟು ಏರಿಕೆಯಾಗಿದೆ.

ನಾಲ್ವರು ಮಕ್ಕಳು ಸೇರಿದಂತೆ ಒಟ್ತು 17 ಜನರು ಸಾವನ್ನಪ್ಪಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಂದು ಬೆಳಿಗ್ಗೆ 6:30ರ ಸುಮಾರಿಗೆ ಗುಲ್ಜಾರ್ ಕಟ್ಟಡ ಎರಡಉ ಅಂಗಡಿಗಳಲ್ಲಿ ಕಾಣಿಸಿಕೊಂಡ ಬೆಂಕಿ ಬಳಿಕ ಕಟ್ಟಡದ ತುಂಬಾ ವ್ಯಾಪಿಸಿದ್ದು, 17 ಜನರು ಸಜೀವದಹನಗೊಂಡಿದ್ದಾರೆ.

ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button