National

*ಭೀಕರ ಬೆಂಕಿ ಅವಘಡ: ಇಬ್ಬರು ಮಕ್ಕಳು ಸೇರಿ 8 ಜನರು ಸಾವು*

ಪ್ರಗತಿವಾಹಿನಿ ಸುದ್ದಿ: ಬೆಳ್ಳಂಬೆಳಿಗ್ಗೆ ಗುಲ್ಜಾರ್ ಹೌಸ್ ಕಟ್ಟಡದಲ್ಲಿ ಭೀಕರ ಅಗ್ನಿ ಅವಘಡ ಸಂಭವಿಸಿದ್ದು, ಮಹಿಳೆಯರು ಸೇರಿ 8 ಜನರು ಸಾವನ್ನಪ್ಪಿರುವ ಘಟನೆ ಹೈದರಾಬಾದ್ ನಲ್ಲಿ ನಡೆದಿದೆ.

ಮೂವರು ಮಹಿಳೆಯರು, ಇಬ್ಬರು ಮಕ್ಕಳು ಸೇರಿದಂತೆ 8 ಜನರು ಮೃತಪಟ್ಟಿದ್ದಾರೆ. ಹಲವರು ಗಂಭೀರವಾಗಿ ಗಾಯಗೊಂಡಿದ್ದಾರೆ. ಇಂದು ಬೆಳಿಗ್ಗೆ 6:30ರ ಸುಮಾರಿಗೆ ಈ ಘಟನೆ ನಡೆದಿದೆ.

ಬೆಂಕಿ ಅವಘಡಕ್ಕೆ ಕಾರಣ ತಿಳಿದುಬಂದಿಲ್ಲ. ಘಟನಾ ಸ್ಥಳಕ್ಕೆ ಅಗ್ನಿಶಾಮಕ ಸಿಬ್ಬಂದಿ, ಪೊಲೀಸರು ದೌಡಾಯಿಸಿದ್ದು ಬೆಂಕಿ ನಿಯಂತ್ರಣಕ್ಕೆ ತಂದಿದ್ದಾರೆ. ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button