CrimeKannada NewsKarnataka NewsNational

*6.33 ಕೋಟಿ ಮೌಲ್ಯದ ಹೈಡ್ರೋಪೋನಿಕ್ ಗಾಂಜಾ ಸೀಜ್: ಇಬ್ಬರ ಬಂಧನ*

ಪ್ರಗತಿವಾಹಿನಿ ಸುದ್ದಿ: ಬ್ಯಾಂಕಾಕ್‌ನಿಂದ ಬೆಂಗಳೂರಿಗೆ ಅಕ್ರಮವಾಗಿ ಹೈಡ್ರೋಪೋನಿಕ್ ಗಾಂಜಾ ಸಾಗಿಸುತ್ತಿದ್ದ ಆರೋಪದ ಮೇಲೆ ಇಬ್ಬರು ಪ್ರಯಾಣಿಕರನ್ನು ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಬಂಧಿಸಲಾಗಿದೆ. 

ಆರೋಪಿಗಳಿಂದ ಒಟ್ಟು 18.09 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ವಶಪಡಿಸಿಕೊಳ್ಳಲಾಗಿದ್ದು, ಇದರ ಮೌಲ್ಯ ಸುಮಾರು ₹6.33 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಸೆಪ್ಟೆಂಬರ್ 26ರಂದು ನಡೆದ ಕಾರ್ಯಾಚರಣೆಯಲ್ಲಿ ಇಬ್ಬರು ಪ್ರಯಾಣಿಕರ ಚೆಕ್‌-ಇನ್ ಬ್ಯಾಗೇಜ್‌ಗಳನ್ನು ಪರಿಶೀಲಿಸಿದಾಗ ಮಾದಕ ವಸ್ತು ಪತ್ತೆಯಾಗಿದೆ.

ಮೊದಲ ಪ್ರಯಾಣಿಕನ ಬ್ಯಾಗ್‌ನಲ್ಲಿ 3.12 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು ₹1.09 ಕೋಟಿ ಎಂದು ಅಂದಾಜಿಸಲಾಗಿದೆ. ಮತ್ತೊಬ್ಬ ಪ್ರಯಾಣಿಕನ ಬ್ಯಾಗ್‌ನಲ್ಲಿ 14.97 ಕೆ.ಜಿ. ಹೈಡ್ರೋಪೋನಿಕ್ ಗಾಂಜಾ ಪತ್ತೆಯಾಗಿದ್ದು, ಇದರ ಮೌಲ್ಯ ಸುಮಾರು ₹5.24 ಕೋಟಿ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರನ್ನೂ ಮಾದಕ ದ್ರವ್ಯಗಳು ಮತ್ತು ಅಮಲು ಪದಾರ್ಥಗಳ ಕಾಯ್ದೆ (NDPS Act) ಅಡಿಯಲ್ಲಿ ಬಂಧಿಸಿ ಮುಂದಿನ ತನಿಖೆ ಕೈಗೊಳ್ಳಲಾಗಿದೆ.

ಹೈಡ್ರೋಪೋನಿಕ್ ಗಾಂಜಾ ಎಂದರೆ ಮಣ್ಣಿನಲ್ಲಿ ಬೆಳೆಸುವ ಬದಲು ನೀರು ಆಧಾರಿತ ಅಥವಾ ಮಣ್ಣು ಇಲ್ಲದ ನಿಯಂತ್ರಿತ ಕೃಷಿ ವ್ಯವಸ್ಥೆಯಲ್ಲಿ ಬೆಳೆಸುವ ಗಾಂಜಾವಾಗಿದೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button