Wanted Tailor2
Cancer Hospital 2
Bottom Add. 3

ಪಕ್ಷ ನಾನೊಬ್ಬನೇ ಅಧಿಕಾರಕ್ಕೆ ತಂದಿದ್ದಾಗಿ ಹೇಳಿಲ್ಲ, ಹೇಳುವುದೂ ಇಲ್ಲ: ಡಿಸಿಎಂ ಡಿ.ಕೆ. ಶಿವಕುಮಾರ್

ಪ್ರಗತಿವಾಹಿನಿ ಸುದ್ದಿ, ಬೆಂಗಳೂರು: “ಪಕ್ಷವನ್ನು ನಾನೊಬ್ಬನೇ ಅಧಿಕಾರಕ್ಕೆ ತಂದಿರುವುದಾಗಿ ಯಾವತ್ತೂ ಹೇಳಿಲ್ಲ, ಹೇಳುವುದೂ ಇಲ್ಲ. ಕಾರ್ಯಕರ್ತರು ಹಾಗೂ ಜನ ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ” ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ತಿಳಿಸಿದರು.

“ಶಿವಕುಮಾರ್ ಒಬ್ಬರೇ ಪಕ್ಷವನ್ನು ಅಧಿಕಾರಕ್ಕೆ ತಂದಿಲ್ಲ” ಎಂಬ ಸತೀಶ್ ಜಾರಕಿಹೊಳಿ ಹೇಳಿಕೆ ವಿಚಾರವಾಗಿ ಮಾಧ್ಯಮಗಳು ನಗರದ ಗಾಂಧಿಭವನದ ಬಳಿ ಕೇಳಿದ ಪ್ರಶ್ನೆಗೆ ಶಿವಕುಮಾರ್ ಅವರು ಈ ರೀತಿ ಪ್ರತಿಕ್ರಿಯೆ ನೀಡಿದರು:

“ಪಕ್ಷದ ಕಾರ್ಯಕರ್ತರು, ನಾವು, ನೀವು ಸೇರಿ, ರಾಜ್ಯದ ಜನರು, ಪ್ರತಿ ಹಳ್ಳಿಯಲ್ಲಿರುವವರು ಬಡಿದಾಡಿ, ಕಾಂಗ್ರೆಸ್ ಪಕ್ಷವನ್ನು ಅಧಿಕಾರಕ್ಕೆ ತಂದಿದ್ದಾರೆ. ಡಿ.ಕೆ. ಶಿವಕುಮಾರ್ ಒಬ್ಬನೇ ಅಧಿಕಾರಕ್ಕೆ ತಂದಿದ್ದಾನೆ ಎಂದು ಇಂದು, ನಾಳೆ, ಎಂದಿಗೂ, ಯಾವತ್ತಿಗೂ ಹೇಳುವುದಿಲ್ಲ” ಎಂದರು.

ಎರಡೂವರೆ ವರ್ಷಗಳ ನಂತರ ಸಚಿವ ಸಂಪುಟ ಪುನಾರಚನೆ ಆಗುತ್ತದೆ ಎಂದು ಮುಖ್ಯ ಸಚೇತಕ ಅಶೋಕ್ ಪಟ್ಟಣ ಹೇಳಿದ್ದಾರೆ ಎಂದು ಕೇಳಿದಾಗ, “ಪಕ್ಷದಲ್ಲಿ ಆಂತರಿಕವಾಗಿ ಒಂದಷ್ಟು ವಿಚಾರಗಳು ಚರ್ಚೆಯಾಗಿರುತ್ತವೆ. ಅದನ್ನು ನಾನು ಬಹಿರಂಗವಾಗಿ ಹೇಳಲು ಸಾಧ್ಯವಿಲ್ಲ. ಅದನ್ನು ಚರ್ಚೆ ಮಾಡಲು ನಾನು ಹೋಗುವುದಿಲ್ಲ, ನನಗೆ ಇರುವ ಮಾಹಿತಿ ಪ್ರಕಾರ ಆ ರೀತಿ ಚರ್ಚೆ ನಡೆದಿಲ್ಲ” ಎಂದು ಹೇಳಿದರು.

Bottom Add3
Bottom Ad 2

You cannot copy content of this page