Kannada NewsKarnataka NewsLatest

*ಸದನಕ್ಕೆ ಗೈರು ಹಾಜರಾದರೆ ಸಹಿಸೋದಿಲ್ಲ: ವಿಶ್ವೇಶ್ವರ ಹೆಗಡೆ ಕಾಗೇರಿ*

ಪ್ರಗತಿ ವಾಹಿನಿ ಸುದ್ದಿ; ಬೆಳಗಾವಿ: ಡಿಸೆಂಬರ್ 19 ರಿಂದ 30 ರವರೆಗೆ ಬೆಳಗಾವಿಯ ಸುವರ್ಣ ವಿಧಾನ ಸೌಧದಲ್ಲಿ ವಿಧಾನ ಮಂಡಲ ಅಧಿವೇಶನ ನಡೆಯಲಿದ್ದು ಅಧಿವೇಶನದ ಕಲಾಪಗಳಲ್ಲಿ ಸಚಿವರು ಮತ್ತು ಶಾಸಕರು ಕಡ್ಡಾಯವಾಗಿ ಹಾಜರಾಗಬೇಕು ಎಂದು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಸೂಚನೆ ನೀಡಿದರು.

ಸುವರ್ಣ ವಿಧಾನಸೌಧದಲ್ಲಿ ಸೋಮವಾರ ಹಮ್ಮಿಕೊಂಡಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಅನಿವಾರ್ಯ ಸಂದರ್ಭಗಳಲ್ಲಿ ಅನುಮತಿ ಮೇರೆಗೆ ಕಲಾಪಗಳ ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು ಎಂದರು.

ಸದನದಲ್ಲಿ ನಾನು ಭಾಗವಹಿಸುವುದಿಲ್ಲ ಎಂಬ ಮಾತುಗಳನ್ನು ನಾನು ಒಪ್ಪುವುದಿಲ್ಲ. ಪ್ರಜಾಸಂಸದೀಯ ಪಾವಿತ್ರ್ಯತೆ ಕಾಪಾಡಲು ಎಲ್ಲ ಜನಪ್ರತಿನಿಧಿಗಳು ಸಹಕರಿಸಬೇಕು.

ಜನರ ಆಶಯಗಳನ್ನು ಈಡೇರಿಸುವ ಸಂಸದೀಯ ಮಾರ್ಗ ಅಧಿವೇಶನದ ಉದ್ದೇಶವಾಗಿರುತ್ತದೆ. ಆದ್ದರಿಂದ ಜನರ ಭಾವನೆಗಳಿಗೆ ಸ್ಪಂದಿಸಿ ಎಲ್ಲರೂ ಸದನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿಕೊಂಡರು. ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಪೂರ್ವಸಿದ್ಧತೆಗಳು ಈಗಾಗಲೇ ಮಾಡಿಕೊಳ್ಳಲಾಗುತ್ತಿದೆ ಎಂದು ಕಾಗೇರಿ ಹೇಳಿದರು.

ಯಾವುದೇ ರೀತಿಯ ಲೋಪದೋಷಗಳಿಲ್ಲದೇ ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ. ಕಳೆದ ಬಾರಿಯ ಅನುಭವದ ಆಧಾರದ ಮೇಲೆ ಉತ್ತಮ ರೀತಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆ ಕಲ್ಪಿಸಲಾಗುವುದು.

ಸದನದ ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ವಿಭಾಗದ ಅಧಿಕಾರಿಗಳ ಜತೆ ಚರ್ಚಿಸಿ, ನಿರ್ದೇಶನಗಳನ್ನು ನೀಡಲಾಗಿದೆ ಎಂದರು.

ಬೆಳಗಾವಿಯಲ್ಲಿ ಹತ್ತನೇ ಅಧಿವೇಶನ ನಡೆಯುತ್ತಿದೆ. ಏಳು ಅಧಿವೇಶನ ಸುವರ್ಣಸೌಧದಲ್ಲಿ ನಡೆದಿದ್ದು, ಎರಡು ಹೊರಗಡೆ ನಡೆಸಲಾಗಿರುತ್ತದೆ. ಈ ಬಾರಿ ಮಹತ್ವದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದೆ.

ಕೋವಿಡ್ ಇಲ್ಲದಿರುವುದರಿಂದ ಈ ಬಾರಿ ಯಾವುದೇ ರೀತಿಯ ನಿಬರ್ಂಧ ಇರುವುದಿಲ್ಲ. ಆದ್ದರಿಂದ ಪ್ರಶ್ನೋತ್ತರ ವೇಳೆ, ಶೂನ್ಯ ವೇಳೆ, ಮಸೂದೆ ಅಂಗೀಕಾರ ಸೇರಿದಂತೆ ಕಲಾಪದ ಎಲ್ಲ ಚಟುವಟಿಕೆಗಳು ಯಥಾ ಪ್ರಕಾರ ನಡೆಯಲಿವೆ ಎಂದರು.

ಸಾರ್ವಜನಿಕರಿಗೆ ಕಲಾಪ ವೀಕ್ಷಿಸಲು ಮುಕ್ತ ಅವಕಾಶ ನೀಡಲಾಗುವುದು. ಪ್ರವೇಶದ್ವಾರದ ಬಳಿ ಅಗತ್ಯ ಗುರುತಿನ ಚೀಟಿಯನ್ನು ನೀಡಿ ಪ್ರವೇಶ ಕಲ್ಪಿಸಲಾಗುತ್ತದೆ.

6 ಮಸೂದೆಗಳನ್ನು ಈ ಅಧಿವೇಶನದಲ್ಲಿ ತರಲಾಗುತ್ತಿದೆ. ಇದರಲ್ಲಿ ಎರಡು ಮಸೂದೆಗಳನ್ನು ಈಗಾಗಲೇ ಮಂಡಿಸಲಾಗಿದ್ದು, ಚರ್ಚಿಸಿ ಅವುಗಳನ್ನು ಅಂಗೀಕರಿಸುವ ಪ್ರಕ್ರಿಯೆ ನಡೆಯಲಿದೆ. ಇದಲ್ಲದೇ ನಾಲ್ಕು ಹೊಸ ವಿಧೇಯಕಗಳು ಬಂದಿರುತ್ತವೆ. ಬೇರೆ ಯಾವುದೇ ವಿಧೇಯಕ ಇದ್ದರೆ ಸರಕಾರ ಅವುಗಳನ್ನು ಮಂಡಿಸಲಿದೆ.

ಮೊದಲ ದಿನ ವಿಧಾನ ಸಭೆ ಉಪಾಧ್ಯಕ್ಷ ಆನಂದ ಮಾಮನಿ ಸೇರಿದಂತೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು ಎಂದರು.

ಅತ್ಯತ್ತಮ ಶಾಸಕ ಪ್ರಶಸ್ತಿ:

ವಿಧಾನಸಭೆ ಅಧ್ಯಕ್ಷರಾದ ಬಳಿಕ ಅತ್ಯುತ್ತಮ ಶಾಸಕರನ್ನು ಆಯ್ಕೆಗೆ ತೀರ್ಮಾನಿಸಲಾಗಿದೆ. ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುವುದು.

ಆಯ್ಕೆ ಸಮಿತಿಯು ನೀಡುವ ವರದಿ ಆಧರಿಸಿ ಅತ್ಯುತ್ತಮ ಶಾಸಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.

ಸಮಗ್ರ ಕರ್ನಾಟಕದ ಜತೆಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಸೂಕ್ತ ದಿನಗಳನ್ನು ನಿಗದಿಪಡಿಸಲಾಗುವುದು.

 

ಅಧಿವೇಶನ ಹೊರತುಪಡಿಸಿ ಉಳಿದ ಅವಧಿಯಲ್ಲಿ ಸುವರ್ಣ ವಿಧಾನಸೌಧ ಸದ್ಬಳಕೆ ಅಗಬೇಕು. ಇಡೀ ವರ್ಷ ಲವಲವಿಕೆಯಿಂದ ಚಟುವಟಿಕೆಗಳು ನಡೆಯಬೇಕು ಎಂಬ ಅಭಿಪ್ರಾಯಗಳಿವೆ. ಶಾಸಕರ ಭವನ ನಿರ್ಮಾಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು ಎಂದರು.

ಸುದ್ದಿಗೋಷ್ಠಿಗೂ ಮೊದಲು ವಿಧಾನಸಭಾಧ್ಯಕ್ಷ ವಿಶ್ವೇಶ್ವರ ಹೆಗಡೆ ಕಾಗೇರಿ ಅಧಿವೇಶನಕ್ಕೆ ಸಂಬಂಧಿಸಿ ಸುವರ್ಣ ವಿಧಾನಸೌಧದಲ್ಲಿ ನಡೆದಿರುವ ಸಿದ್ಧತೆಗಳನ್ನು ಪರಿಶೀಲಿಸಿದರು. ಅಲ್ಲದೇ, ಆರೋಗ್ಯ ಇಲಾಖೆ, ಲೋಕೋಪಯೋಗಿ ಇಲಾಖೆ ಸೇರಿದಂತೆ ವಿವಿಧ ಇಲಾಖೆಯ ಅಧಿಕಾರಿಗಳ ಜತೆ ಸಭೆ ನಡೆಸಿ ಚರ್ಚಿಸಿದರು. ಜಿಲ್ಲಾಧಿಕಾರಿ ನಿತೇಶ ಪಾಟೀಲ್ ಇತರರು ಇದ್ದರು.

 

ವಿಶ್ವೇಶ್ವರ ಹೆಗಡೆ ಕಾಗೇರಿ ಅವರು ಬೆಳಗಾವಿ ಸುವರ್ಣ ವಿಧಾನಸೌಧದಲ್ಲಿ  ನಡೆಸಿದ ಪತ್ರಿಕಾಗೋಷ್ಠಿಯ ಪ್ರಮುಖಾಂಶಗಳು

 
* ಡಿಸೆಂಬರ್ 19 ರಿಂದ 30 ರವರೆಗೆ 15ನೇ ವಿಧಾನಸಭೆಯ 14 ನೇ ಅಧಿವೇಶನ ನಡೆಯಲಿದೆ.
* ಅಧಿವೇಶನವನ್ನು ಅಚ್ಚುಕಟ್ಟಾಗಿ ನಡೆಸಲು ಪೂರ್ವಸಿದ್ಧತೆಗಳು ಈಗಾಗಲೇ ಮಾಡಿಕೊಳ್ಳಲಾಗುತ್ತಿದೆ.
* ಯಾವುದೇ ರೀತಿಯ ಲೋಪದೋಷಗಳಿಲ್ಲದೇ ಅಚ್ಚುಕಟ್ಟಾಗಿ ನಡೆಸಲು ಅಧಿಕಾರಿಗಳಿಗೆ ಅಗತ್ಯ ಸೂಚನೆ ನೀಡಲಾಗಿದೆ.
* ಕಳೆದ ಬಾರಿಯ ಅನುಭವದ ಆಧಾರದ ಮೇಲೆ ಉತ್ತಮ ರೀತಿಯಲ್ಲಿ ವಸತಿ, ಊಟೋಪಾಹಾರ, ಸಾರಿಗೆ ಮತ್ತಿತರ ವ್ಯವಸ್ಥೆ ಕಲ್ಪಿಸಲಾಗುವುದು.
* ಸದನದ ಕಾರ್ಯಕಲಾಪಗಳನ್ನು ಸುಗಮವಾಗಿ ನಡೆಸುವ ನಿಟ್ಟಿನಲ್ಲಿ ಸಂಬಂಧಿಸಿದ ಎಲ್ಲ ವಿಭಾಗದ ಅಧಿಕಾರಿಗಳ ಜತೆ ಚರ್ಚಿಸಿ, ನಿರ್ದೇಶನಗಳನ್ನು ನೀಡಲಾಗಿದೆ.
* ಬೆಳಗಾವಿಯಲ್ಲಿ ಹತ್ತನೇ ಅಧಿವೇಶನ ನಡೆಯುತ್ತಿದೆ. ಏಳು ಅಧಿವೇಶನ ಸುವರ್ಣಸೌಧದಲ್ಲಿ ನಡೆದಿದ್ದು, ಎರಡು ಹೊರಗಡೆ ನಡೆಸಲಾಗಿರುತ್ತದೆ.
* ಈ ಬಾರಿ ಮಹತ್ವದ ಅಧಿವೇಶನ ಬೆಳಗಾವಿಯಲ್ಲಿ ನಡೆಯುತ್ತಿದೆ.
* ಕೋವಿಡ್ ಇಲ್ಲದಿರುವುದರಿಂದ ಈ ಬಾರಿ ಯಾವುದೇ ರೀತಿಯ ನಿರ್ಬಂಧ ಇರುವುದಿಲ್ಲ. ಆದ್ದರಿಂದ ಪ್ರಶ್ನೋತ್ತರ ವೇಳೆ, ಶೂನ್ಯ ವೇಳೆ, ಮಸೂದೆ ಅಂಗೀಕಾರ ಸೇರಿದಂತೆ ಕಲಾಪದ ಎಲ್ಲ ಚಟುವಟಿಕೆಗಳು ಯಥಾ ಪ್ರಕಾರ ನಡೆಯಲಿವೆ.
* ಸಾರ್ವಜನಿಕರಿಗೆ ಕಲಾಪ ವೀಕ್ಷಿಸಲು ಮುಕ್ತ ಅವಕಾಶ ನೀಡಲಾಗುವುದು. ಪ್ರವೇಶದ್ವಾರದ ಬಳಿ ಅಗತ್ಯ ಗುರುತಿನ ಚೀಟಿಯನ್ನು ನೀಡಿ ಪ್ರವೇಶ ಕಲ್ಪಿಸಲಾಗುತ್ತದೆ.
* 6 ಮಸೂದೆಗಳನ್ನು ಈ ಅಧಿವೇಶನದಲ್ಲಿ ತರಲಾಗುತ್ತಿದೆ. ಇದರಲ್ಲಿ ಎರಡು ಮಸೂದೆಗಳನ್ನು ಈಗಾಗಲೇ ಮಂಡಿಸಲಾಗಿದ್ದು, ಚರ್ಚಿಸಿ ಅವುಗಳನ್ನು ಅಂಗೀಕರಿಸುವ ಪ್ರಕ್ರಿಯೆ ನಡೆಯಲಿದೆ.
ಇದಲ್ಲದೇ ನಾಲ್ಕು ಹೊಸ ವಿಧೇಯಕಗಳು ಬಂದಿರುತ್ತವೆ. ಬೇರೆ ಯಾವುದೇ ವಿಧೇಯಕ ಇದ್ದರೆ ಸರಕಾರ ಅವುಗಳನ್ನು ಮಂಡಿಸಲಿದೆ.
* ಮೊದಲ ದಿನ ವಿಧಾನ ಸಭೆ ಉಪಾಧ್ಯಕ್ಷ ಆನಂದ ಮಾಮನಿ ಸೇರಿದಂತೆ ಅಗಲಿದ ಗಣ್ಯರಿಗೆ ಶ್ರದ್ಧಾಂಜಲಿ ಸಲ್ಲಿಸಲಾಗುವುದು.
* ವಿಧಾನಸಭೆ ಅಧ್ಯಕ್ಷರಾದ ಬಳಿಕ ಅತ್ಯುತ್ತಮ ಶಾಸಕರನ್ನು ಆಯ್ಕೆಗೆ ತೀರ್ಮಾನಿಸಲಾಗಿದೆ. ಈ ಬಾರಿಯ ಬೆಳಗಾವಿ ಅಧಿವೇಶನದಲ್ಲಿ ಅತ್ಯುತ್ತಮ ಶಾಸಕ ಪ್ರಶಸ್ತಿಯನ್ನು ನೀಡಲಾಗುವುದು.
* ಆಯ್ಕೆ ಸಮಿತಿಯು ನೀಡುವ ವರದಿ ಆಧರಿಸಿ ಅತ್ಯುತ್ತಮ ಶಾಸಕರ ಪ್ರಶಸ್ತಿಗೆ ಆಯ್ಕೆ ಮಾಡಲಾಗುತ್ತದೆ.
* ಸಮಗ್ರ ಕರ್ನಾಟಕದ ಜತೆಗೆ ವಿಶೇಷವಾಗಿ ಉತ್ತರ ಕರ್ನಾಟಕ ಭಾಗದ ವಿಷಯಗಳ ಚರ್ಚೆಗೆ ಹೆಚ್ಚಿನ ಅವಕಾಶ ಕಲ್ಪಿಸಲಾಗುವುದು. ಇದಕ್ಕಾಗಿ ಸೂಕ್ತ ದಿನಗಳನ್ನು ನಿಗದಿಪಡಿಸಲಾಗುವುದು.
* ಅಧಿವೇಶನ ಹೊರತುಪಡಿಸಿ ಉಳಿದ ಅವಧಿಯಲ್ಲಿ ಸುವರ್ಣ ವಿಧಾನಸೌಧ ಸದ್ಬಳಕೆ ಅಗಬೇಕು. ಇಡೀ ವರ್ಷ ಕಡ್ಡದಲ್ಲಿ ಲವಲವಿಕೆಯಿಂದ ಚಟುವಟಿಕೆಗಳು ನಡೆಯಬೇಕು ಎಂಬ ಅಭಿಪ್ರಾಯಗಳಿವೆ.
ಶಾಸಕರ ಭವನ ನಿರ್ಮಾಣ ಸೇರಿದಂತೆ ವಿವಿಧ ವಿಷಯಗಳ ಬಗ್ಗೆ ಸರಕಾರದ ಹಂತದಲ್ಲಿ ಚರ್ಚಿಸಿ ಸೂಕ್ತ ಕ್ರಮಗಳನ್ನು ತೆಗೆದುಕೊಳ್ಳಲಾಗುವುದು.
* ಅಧಿವೇಶನದ ಕಲಾಪಗಳಲ್ಲಿ ಸಚಿವರು ಮತ್ತು ಶಾಸಕರು ಕಡ್ಡಾಯವಾಗಿ ಹಾಜರಾಗಬೇಕು. ಅನಿವಾರ್ಯ ಸಂದರ್ಭಗಳಲ್ಲಿ ತಮ್ಮ ಅನುಮತಿ ಮೇರೆಗೆ ಕಲಾಪಗಳ ಹಾಜರಾತಿಯಿಂದ ವಿನಾಯಿತಿ ಪಡೆಯಬಹುದು.
ಸದನದಲ್ಲಿ ನಾನು ಭಾಗವಹಿಸುವುದಿಲ್ಲ ಎಂಬ ಮಾತುಗಳನ್ನು ನಾನು ಒಪ್ಪುವುದಿಲ್ಲ. ಪ್ರಜಾಸಂಸದೀಯ ಪಾವಿತ್ರ್ಯತೆ ಕಾಪಾಡಲು ಎಲ್ಲ ಜನಪ್ರತಿನಿಧಿಗಳು ಸಹಕರಿಸಬೇಕು.
* ಜನರ ಆಶಯಗಳನ್ನು ಈಡೇರಿಸುವ ಸಂಸದೀಯ ಮಾರ್ಗ ಅಧಿವೇಶನದ ಉದ್ದೇಶವಾಗಿರುತ್ತದೆ. ಆದ್ದರಿಂದ ಜನರ ಭಾವನೆಗಳಿಗೆ ಸ್ಪಂದಿಸಿ ಎಲ್ಲರೂ ಸದನದಲ್ಲಿ ಕಡ್ಡಾಯವಾಗಿ ಭಾಗವಹಿಸಬೇಕು ಎಂದು ಮನವಿ ಮಾಡಿಕೊಂಡರು.

 

*ಬಿಜೆಪಿಯನ್ನ ತೊರೆಯುವುದಾಗಿ ಘೋಷಿಸುತ್ತಲೇ ಹೊಸ ಬಾಂಬ್​ ಸಿಡಿಸಿದ ಮಾಜಿ ಎಂಎಲ್​ಸಿ ಸಂದೇಶ್ ನಾಗರಾಜ್*

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button