Kannada NewsLatestWorld

*ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ವಿಮಾನ ಪತನ: 13 ಜನರು ದುರ್ಮರಣ*

ಪ್ರಗತಿವಾಹಿನಿ ಸುದ್ದಿ: ಪ್ರವಾಸಿಗರನ್ನು ಕರೆದೊಯ್ಯುತ್ತಿದ್ದ ವಿಮಾನವೊಂದು ಪತನಗೊಂಡಿರುವ ಘಟನೆ ಪೆರುವಿನ ಪ್ರವಾಸಿ ತಾಣದಲ್ಲಿ ನಡೆದಿದೆ.

ದಕ್ಷಿಣ ಅಮೆರಿಕದ ಪೆರು ದೇಶದ ಜಗತ್ಪ್ರಸಿದ್ಧ ಯುನೆಸ್ಕೋ ವಿಶ್ವ ಪರಂಪರೆಯ ತಾಣವಾದ ‘ನಾಜ್ಕಾ ಲೈನ್ಸ್’ (Nazca Lines) ವೀಕ್ಷಣೆಗೆ ಪ್ರವಾಸಿಗರನ್ನು ಕೊಂಡೊಯ್ಯುತ್ತಿದ್ದ ವಿಮಾನ ದುರಂತಕ್ಕೀಡಾಗಿದೆ.

Related Articles
Home add -Advt

ಅಪಘಾತದಲ್ಲಿ ವಿಮಾನದಲ್ಲಿದ್ದ 11 ವಿದೇಶಿ ಪ್ರವಾಸಿಗರು ಹಾಗೂ ಇಬ್ಬರು ಸಿಬ್ಬಂದಿ ಸೇರಿ ಎಲ್ಲಾ 13 ಜನರು ಸಾವನ್ನಪ್ಪಿದ್ದಾರೆ ಎಂದು ಪೆರುವಿನ ಸಾರಿಗೆ ಮತ್ತು ಸಂವಹನ ಸಚಿವಾಲಯ ದೃಢಪಡಿಸಿದೆ.

ಏರೋಡಿಯಾನಾ ವಿಮಾನಯಾನ ಸಂಸ್ಥೆಗೆ ಸೇರಿದ ‘ಸೆಸ್ನಾ ಕ್ಯಾರವಾನ್ C-208’ ಎಂಬ ಸಣ್ಣ ಪ್ರವಾಸಿ ವಿಮಾನವು ನಾಜ್ಕಾ ಏರ್‌ಡ್ರೋಮ್‌ನಿಂದ ಹಾರಿತ್ತು. ಮಧ್ಯಾಹ್ನ ಸುಮಾರು 1 ಗಂಟೆಯ ವೇಳೆಗೆ ಪ್ಯೂಬ್ಲೊ ನ್ಯೂಯೆವೊ ಜಿಲ್ಲೆಯ ಸೊಕೊಸ್ ಬಳಿ ಹಾರಾಟ ನಡೆಸುತ್ತಿದ್ದಾಗ, ವಿಮಾನದಲ್ಲಿದ್ದ ಸಿಬ್ಬಂದಿ ನಿಯಂತ್ರಣ ಕೊಠಡಿಗೆ ತುರ್ತು ಪರಿಸ್ಥಿತಿಯ ಸಂದೇಶ ರವಾನಿಸಿದ್ದರು. ಸಂದೇಶ ರವಾನೆಯಾದ ಕೆಲವೇ ಕ್ಷಣಗಳಲ್ಲಿ ವಿಮಾನದೊಂದಿಗಿನ ರೇಡಿಯೋ ಸಂಪರ್ಕ ಸಂಪೂರ್ಣವಾಗಿ ಕಡಿದುಬಿದ್ದು, ವಿಮಾನ ನೆಲಕ್ಕೆ ಅಪ್ಪಳಿಸಿದೆ.

ಅಪಘಾತದ ಮಾಹಿತಿ ಸಿಗುತ್ತಿದ್ದಂತೆಯೇ ರಾಷ್ಟ್ರೀಯ ಪೊಲೀಸ್ ಪಡೆ, ನಾಗರಿಕ ವಿಮಾನಯಾನ ನಿರ್ದೇಶನಾಲಯ ಹಾಗೂ ಅಗ್ನಿಶಾಮಕ ಸಿಬ್ಬಂದಿ ಸ್ಥಳಕ್ಕೆ ಧಾವಿಸಿದರು. ಆದರೆ, ವಿಮಾನ ಸಂಪೂರ್ಣ ನಜ್ಜುಗುಜ್ಜಾಗಿದ್ದರಿಂದ ಯಾರೊಬ್ಬರೂ ಬದುಕುಳಿದಿಲ್ಲ ಎಂದು ರಕ್ಷಣಾ ಪಡೆಗಳು ಸ್ಪಷ್ಟಪಡಿಸಿವೆ.

Related Articles

Back to top button