Uncategorized

*ಮಳೆಯಲ್ಲಿಯೆ ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ ಡಿಸಿಎಂ*

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಜಿಟಿ ಜಿಟಿ ಮಳೆ ಮಧ್ಯೆಯೇ ಉಪಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಇಂದು ಬೆಂಗಳೂರು ಸಿಟಿ ರೌಂಡ್ಸ್ ಹಾಕಿದ್ದಾರೆ.

ಈ ವೇಳೆ ಸರ್ವಜ್ಞನಗರ ಸೇರಿದಂತೆ ಹಲವೆಡೆ ಭೇಟಿ ನೀಡಿದ್ದು, ಸಾರ್ವಜನಿಕರ ಅಹವಾಲು ಸ್ವೀಕರಿಸಿ, ಮಳೆ ಸಮಸ್ಯೆಗಳ ಬಗ್ಗೆ ಪರಿಶೀಲನೆ ನಡೆಸಿದರು.

ಸಿಟಿ ರೌಂಡ್ಸ್ ಬಳಿಕ ಮಾತನಾಡಿದ ಡಿಸಿಎಂ, ಸರ್ವಜ್ಞನಗರದಲ್ಲಿ ಟ್ರಾಫಿಕ್ ಜಾಮ್ ಸಮಸ್ಯೆ, ಐಟಿಸಿ ರಸ್ತೆ ಫ್ಲೈ ಓವರ್ ವಿಸ್ತೀರ್ಣ, ಎರಡು ಜಾಗದಲ್ಲಿ ಪಾರ್ಕಿಂಗ್ ವ್ಯವಸ್ಥೆ ಮಾಡಲು ಸಾರ್ವಜನಿಕರು ಮನವಿ ಮಾಡಿದ್ದಾರೆ. ಈ ಹಿಂದಿನ ಸರ್ಕಾರ ಸಮಸ್ಯೆ ಬಗೆಹರಿಸಿಲ್ಲ, ಹಾಗಾಗಿ ಜನರು ಈ ಪ್ರಸ್ತಾವನೆಯನ್ನು ಇಟ್ಟಿದ್ದಾರೆ ಎಂದರು.


Home add -Advt

Related Articles

Back to top button