Belagavi NewsBelgaum NewsKarnataka NewsPolitics

*ಕಾಂಗ್ರೆಸ್ ಅಧಿವೇಶನಕ್ಕೆ ಬರಾಕ್ ಒಬಾಮಗೆ ಆಹ್ವಾನಿಸಿದ್ದೇನೆ: ಸಿಎಂ ಸಿದ್ದರಾಮಯ್ಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: 1924ರಲ್ಲಿ ಮಹಾತ್ಮ ಗಾಂಧೀಜಿಯವರ ಅಧ್ಯಕ್ಷತೆಯಲ್ಲಿ ನಡೆದ ಬೆಳಗಾವಿ ಕಾಂಗ್ರೆಸ್ ಅಧಿವೇಶನಕ್ಕೆ 100 ವರ್ಷ ಸಂದಿದೆ. ಈ ಹಿನ್ನೆಲೆ ಬೆಳಗಾವಿಯಲ್ಲಿ ನಡೆಯಲಿರುವ ಜಂಟಿ ಅಧಿವೇಶನದಲ್ಲಿ ಪಾಲ್ಗೊಳ್ಳುವಂತೆ ಬರಾಕ್ ಒಬಾಮಗೆ ಪತ್ರ ಬರೆದು ಆಹ್ವಾನಿಸಿದ್ದೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದರು.

ಈ ಬಗ್ಗೆ ಬೆಂಗಳೂರಿನಲ್ಲಿ ಮಾತನಾಡಿದ ಅವರು, 1924ರಲ್ಲಿ ಬೆಳಗಾವಿಯಲ್ಲಿ ಗಾಂಧೀಜಿ ಅವರ ಅಧ್ಯಕ್ಷತೆಯಲ್ಲಿ ನಡೆದ 39ನೇ ಎಐಸಿಸಿ ಅಧಿವೇಶನಕ್ಕೆ ಈಗ ಶತಮಾನೋತ್ಸವ ಸಂಭ್ರಮವನ್ನು ಆಚರಿಸಲು ನಿರ್ಧರಿಸಿದ್ದು, ಹಳೆಯ ನೆನಪನ್ನು ಮೆಲುಕು ಹಾಕುವ ಸಲುವಾಗಿ 2024ರ ಅ.2ರಿಂದ 2025ರ ಅ.2ರವರೆಗೆ ಶತಮಾನೋತ್ಸವ ಆಚರಣೆಗೆ ನಿರ್ಧರಿಸಲಾಗಿದೆ ಎಂದರು.

ಇದರ ಜೊತೆಗೆ ಬೆಳಗಾವಿಯಲ್ಲಿ ನಡೆಯಲಿರುವ ಚಳಿಗಾಲದ ಅಧಿವೇಶನದಲ್ಲಿ ಜಂಟಿ ಕಾರ್ಯಕ್ರಮವನ್ನು ಉದ್ದೇಶಿಸಿ ಮಾತನಾಡಲು ರಾಜ್ಯಕ್ಕೆ ಬರಬೇಕು ಎಂದು ಅಮೆರಿಕದ ಮಾಜಿ ಅಧ್ಯಕ್ಷ ಬರಾಕ್ ಒಬಾಮಾಗೆ ಸಿಎಂ ಸಿದ್ದರಾಮಯ್ಯ ಪತ್ರ ಬರೆದಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button