Election NewsKannada NewsKarnataka NewsNationalPolitics

*ಸಚಿವ ಸಂಪುಟ ಬದಲಾವಣೆ ಬಗ್ಗೆ ನನಗೆ ಮಾಹಿತಿ ಇಲ್ಲ: ಡಿಕೆಶಿ*

ಪ್ರಗತಿವಾಹಿನಿ ಸುದ್ದಿ: ಸಚಿವ ಸಂಪುಟದಲ್ಲಿ ಬದಲಾವಣೆ ಮಾಡುವುದು ಪಕ್ಷ ಹಾಗೂ ಮುಖ್ಯಮಂತ್ರಿಗಳಿಗೆ ಬಿಟ್ಟ ವಿಚಾರ. ಅವರು ಈ ಬಗ್ಗೆ ತೀರ್ಮಾನ ಮಾಡುತ್ತಾರೆ ಎಂದು ಡಿಸಿಎಂ ಡಿ.ಕೆ ಶಿವಕುಮಾರ್‌ ಹೇಳಿದರು.

ಸದಾಶಿವನಗರ ನಿವಾಸದ ಬಳಿ ಇಂದು ಮಾಧ್ಯಮಗಳಿಗೆ ಪ್ರತಿಕ್ರಿಯಿಸಿದ ಅವರು, ಸಚಿವ ಸಂಪುಟದಲ್ಲಿ ಬದಲಾವಣೆ ವಿಚಾರವಾಗಿ ನನಗೆ ಯಾವುದೇ ಮಾಹಿತಿ ಇಲ್ಲ. ಈ ವಿಚಾರದಲ್ಲಿ ನಾನು ಮಾತನಾಡುವುದಿಲ್ಲ. ನನ್ನ ಜೊತೆ ಈ ವಿಚಾರ ಚರ್ಚೆ ಮಾಡಿದರೆ ನಾನು ನನ್ನ ಸಲಹೆ ನೀಡುತ್ತೇನೆ. ಈ ವಿಚಾರವಾಗಿ ಅನಗತ್ಯ ಚರ್ಚೆ ಮಾಡಿ ಗೊಂದಲ ಸೃಷ್ಟಿಸಬೇಡಿ ಎಂದು ಮಾಧ್ಯಮಗಳಿಗೆ ಮನವಿ ಮಾಡುತ್ತೇನೆ ಎಂದು ತಿಳಿಸಿದರು.

Home add -Advt

ಮುಖ್ಯಮಂತ್ರಿಗಳು ಔತಣಕೂಟ ಆಯೋಜಿಸಿರುವ ಬಗ್ಗೆ ಕೇಳಿದಾಗ, ಇದರಲ್ಲಿ ತಪ್ಪೇನಿದೆ? ಒಟ್ಟಿಗೆ ಸೇರಿ ಊಟ ಮಾಡಿ, ಸಾಕಷ್ಟು ವಿಚಾರಗಳ ಬಗ್ಗೆ ಚರ್ಚೆ ಮಾಡುವುದು ಸಹಜ ಎಂದು ತಿಳಿಸಿದರು.

Related Articles

Back to top button