Belagavi NewsBelgaum NewsKannada NewsKarnataka NewsPolitics

*ಸಿಎಂ ಸಿದ್ದರಾಮಯ್ಯ ಬದಲಾವಣೆ ಬಗ್ಗೆ ನನಗೆನೂ ಮಾಹಿತಿ ಇಲ್ಲ: ಶಾಸಕ ವಿಶ್ವಾಸ ವೈದ್ಯ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ರಾಜ್ಯ ರಾಜಕೀಯದಲ್ಲಿ ಸಿಎಂ ಬದಲಾವಣೆ ಮಾತುಗಳು ಬಲವಾಗಿ ಕೇಳಿ ಬರುತ್ತಿದ್ದು, ಇದರ ಬಗ್ಗೆ ನನಗೆನೂ ಗೋತ್ತಿಲ್ಲ ಎಂದು ಸವದತ್ತಿ ಯಲ್ಲಮ್ಮ ಕ್ಷೇತ್ರದ ಶಾಸಕ ವಿಶ್ವಾಸ ವೈದ್ಯ ಅವರು ತಿಳಿಸಿದ್ದಾರೆ. 

ಬೆಳಗಾವಿ ನಗರದಲ್ಲಿ ಇಂದು ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಯಲ್ಲಮ್ಮ ಪ್ರಾಧಿಕಾರದ ಸಭೆ ಹಿನ್ನೆಲೆಯಲ್ಲಿ ಬೆಳಗಾವಿಯಲ್ಲಿ ಇದ್ದೇನೆ. ಸಿಎಂ ಸಿದ್ದರಾಮಯ್ಯ ಬದಲಾವಣೆ ಬಗ್ಗೆ ಮಾಹಿತಿ ಇಲ್ಲ ಎಂದರು.

ಸಿಎಲ್‌ಪಿ ಸಭೆ ವಿಚಾರವಾಗಿ ಮಾತನಾಡಿದ ಅವರು, ಸಿಎಲ್ ಪಿ ಬಗ್ಗೆ ಇನ್ನೂ ಅಧಿಕೃತ ಮಾಹಿತಿ ಇಲ್ಲ ಎಂದರು.

ಸತೀಶ್ ಜಾರಕಿಹೊಳಿಗೆ ಕೆಪಿಸಿಸಿ ಅಧ್ಯಕ್ಷ ಕೋಡುತ್ತಾರೆ ಎಂಬ ವಿಚಾರಕ್ಕೆ ಪ್ರತಿಕ್ರಿಯೆ ನೀಡಿದ ಅವರು, ಕೆಪಿಸಿಸಿ ಅಧ್ಯಕ್ಷ ಸ್ಥಾನ ಕೊಟ್ಟರೇ ಒಳ್ಳೆಯದು. ಒಳ್ಳೆಯ ಕೆಲಸ ಮಾಡುತ್ತಾರೆ, ಪಕ್ಷ ಮತ್ತೆ ಅಧಿಕಾರಕ್ಕೆ ಬರಲು ಸಹಕಾರಿಯಾಗಲಿದೆ.

ನಾಳೆ ಮೆಸಜ್ ಬಂದ್ರೆ ಬೆಂಗಳೂರಿಗೆ ಹೋಗುತ್ತೇನೆ ಇಲ್ಲ ಅಂದ್ರೆ ಇಲ್ಲ.ಒಮ್ಮೆ, ಎರಡು ಸಲ ಗೆದ್ದವರು ಸೇರಿ ಬೆಂಗಳೂರಿನಲ್ಲಿ ನಾಲ್ಕೈದು ತಿಂಗಳ ಹಿಂದೆ 65 ಜನ ಶಾಸಕರು ಸಭೆ ಮಾಡಿದ್ವಿ. 136 ಶಾಸಕ ಪೈಕಿ ಶೇಕಡಾ 40 ರಷ್ಟು ಮೊದಲ ಸಲ ಗೆದ್ದವರು ಇದ್ದೇವೆ. ನಮ್ಮವರಿಗೂ ಅವಕಾಶ ಕೊಡಿ ಎಂದು ಕೇಳಿದ್ದೇವೆ. ನಾನು ಸಚಿವ ಸ್ಥಾನದ ಲಾಭಿ ಮಾಡಲ್ಲ. ನಾನು ಸಚಿವ ಸ್ಥಾನದ ಆಕಾಂಕ್ಷಿಯಲ್ಲ ಎಂದು ತಿಳಿಸಿದರು. 

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button