Kannada NewsKarnataka News

ಸಿದ್ದರಾಮಯ್ಯ ಜತೆ ಮಾತುಕತೆ: ಬೆಳಗಾವಿಯಲ್ಲಿ ಬಹಿರಂಗಪಡಿಸಿದ ಯಡಿಯೂರಪ್ಪ

ಪ್ರಗತಿ ವಾಹಿನಿ ಸುದ್ದಿ ಬೆಳಗಾವಿ

ಸಿದ್ದರಾಮಯ್ಯನವರನ್ನು ಬೆಂಗಳೂರು ವಿಮಾನ ನಿಲ್ದಾಣದಲ್ಲಿ ಭೇಟಿ ಮಾಡಿದಾಗ ಯಾವುದೇ ರಾಜಕೀಯ ಚರ್ಚೆ ನಡೆದಿಲ್ಲ. ಅವರು ಹುಬ್ಬಳ್ಳಿಗೆ ಚುನಾವಣಾ ಪ್ರಚಾರದ ನಿಮಿತ್ತ ಹೊರಟಿದ್ದಾಗಿ ಹೇಳಿದರೆ ನಾನು ಬೆಳಗಾವಿಗೆ ಹೊರಟಿದ್ದಾಗಿ ತಿಳಿಸಿದೆ. ರಾಜಕೀಯವಾಗಿ ನಾವು ವಿರೋಧಿಗಳು, ವಯಕ್ತಿಕವಾಗಿ ನಮ್ಮ ನಡುವೆ ಉತ್ತಮ ಸ್ನೇಹವಿದೆ ಎಂದು ಮಾಜಿ ಸಿಎಂ ಬಿ.ಎಸ್.ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಯಡಿಯೂರಪ್ಪ-ಸಿದ್ದರಾಮಯ್ಯ ಭೇಟಿ; ಬೆಳಗಾವಿಗೆ ಬರುವ ಮುನ್ನ ಚರ್ಚೆ; ರಾಜಕೀಯ ಕುತೂಹಲ

ವಾಯವ್ಯ ಶಿಕ್ಷಕರ ಹಾಗೂ ಪದವೀಧರರ ಕ್ಷೇತ್ರದ ಅಭ್ಯರ್ಥಿಗಳ ಪರ ಪ್ರಚಾರ ಸಭೆಗಳಲ್ಲಿ ಪಾಲ್ಗೊಳ್ಳಲು ಸೋಮವಾರ ಬೆಳಗಾವಿಗೆ ಆಗಮಿಸಿರುವ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.

ವಿಪಕ್ಷ ನಾಯಕ ಸಿದ್ದರಾಮಯ್ಯ ಹಾಗೂ ನಮ್ಮ ನಡುವೆ ಯಾವುದೇ ಭಿನ್ನಾಭಿಪ್ರಾಯ ಇಲ್ಲ. ರಾಜಕೀಯವಾಗಿ ಅವರು ಅವರ ಪಕ್ಷದ ಪರವಾಗಿ ಕೆಲಸ ಮಾಡುತ್ತಾರೆ. ನಾನು ನನ್ನ ಪಕ್ಷದ ಪರವಾಗಿ ಮಾಡುತ್ತೇನೆ.  ವಿಮಾನ ನಿಲ್ದಾಣದಲ್ಲಿ ಔಪಚಾರಿಕವಾಗಿ ಮಾತುಕತೆ ಮಾಡಿದ್ದೇವೆ ಎಂದು ಮಾಧ್ಯಮದವರ ಪ್ರಶ್ನೆಗೆ ಉತ್ತರಿಸಿದರು.

ನಾಳೆ, ನಾಡಿದ್ದು ಬಾಗಲಕೋಟ, ವಿಜಯಪುರ ಹಾಗೂ ಬೆಳಗಾವಿಯಲ್ಲಿ ಪ್ರವಾಸ ಮಾಡುತ್ತೇವೆ. ವಾಯುವ್ಯ ಪದವೀಧ ಮತಕ್ಷೇತ್ರದ ಬಿಜೆಪಿ ಅಭ್ಯರ್ಥಿ ಹಣಮಂತ ನಿರಾಣಿ ೫೦ ಸಾವಿರ ಅಂತರದಲ್ಲಿ ಗೆಲವು ಸಾಧಿಸುತ್ತಾರೆ. ಶಿಕ್ಷಕರ ಮತಕ್ಷೇತ್ರದ ಅಭ್ಯರ್ಥಿ ಅರುಣ ಶಹಾಪುರ ಅವರು ಅಂತರ ಕಡಿಮೆ ಆಗಬಹುದು. ಅವರು ಗೆಲವು ಸಾಧಿಸುತ್ತಾರೆ. ಪ್ರಧಾನಿ ನರೇಂದ್ರ ಮೋದಿ ಅವರ ಆಶೀರ್ವಾದದಿಂದ ಚುನಾವಣೆ ಗೆಲವು ಸಾಧಿಸುತ್ತೇವೆ ಎಂದರು.

ಯಡಿಯೂರಪ್ಪ-ಸಿದ್ದರಾಮಯ್ಯ ಭೇಟಿ; ಬೆಳಗಾವಿಗೆ ಬರುವ ಮುನ್ನ ಚರ್ಚೆ; ರಾಜಕೀಯ ಕುತೂಹಲ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button