*ಹುಟ್ಟುವ ಮೊದಲೇ ಸತ್ತಿತ್ತು I.N.D.I.A ಒಕ್ಕೂಟ: ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಟೀಕೆ*
ಪ್ರಗತಿವಾಹಿನಿ ಸುದ್ದಿ; I.N.D.I.A ಒಕ್ಕೂಟ ಹುಟ್ಟುವ ಮೊದಲೇ ಸತ್ತಿದೆ ಎಂದು ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಅಣಕಿಸಿದರು.
ಬೆಂಗಳೂರಿನಲ್ಲಿ ಇಂದು ನಡೆದ ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸಭೆ ವೇಳೆ ಮಾದ್ಯಮದವರ ಜತೆ ಮಾತನಾಡಿ, I.N.D. I.A ಒಕ್ಕೂಟ ಜನ್ಮತಾಳುವ ಮೊದಲೇ ಸತ್ತಂತೆ ಇತ್ತೆಂದು ಪ್ರತಿಕ್ರಿಯಿಸಿದರು.
ನೇತೃತ್ವ, ನೀತಿ, ನಿಯತ್ತು ಮೂರೂ ಇಲ್ಲದಂತಹದ್ದು I.N.D.I.A ಒಕ್ಕೂಟ. ಇದನ್ನರಿತೆ ನಿತೀಶ್ ಕುಮಾರ್, ಮಮತಾ ಬ್ಯಾನರ್ಜಿ ಹೊರ ಬಂದಿದ್ದಾರೆ ಎಂದರು.
ಕಾಂಗ್ರೆಸ್ ಮತ್ತು ಆರ್‌ಜೆಡಿ ಎರಡೂ ಕಡು ಭ್ರಷ್ಟರ ಪಕ್ಷಗಳು. ಕೇವಲ ಸ್ವ ಕುಟುಂಬ ಮತ್ತು ಪರಿವಾರಕ್ಕಾಗಿ ಹೋರಾಡುವ ಪಕ್ಷಗಳು. ಜನರ ಕಷ್ಟ, ದುಃಖ, ಸಮಸ್ಯೆಗಳಿಗೆ ಸ್ಪಂದಿಸುವಲ್ಲಿ ತಮಗೆ ಸಂಬಂಧವೇ ಇಲ್ಲದಂತೆ ವರ್ತಿಸುವ ನಾಯಕರ ಪಕ್ಷಗಳು ಎಂದು ಜೋಶಿ ಜರಿದರು.
ಇಂಡಿಯಾ ಒಕ್ಕೂಟದಲ್ಲಿ ಮನೆ ಮಾಡಿದ್ದ ವಿರೋಧಿ ನಡೆಯಿಂದ ಬೇಸತ್ತು, ದುಃಖಿತರಾಗಿ ನಿತೀಶ್ ಕುಮಾರ್ ಹೊರ ಬಂದಿದ್ದಾರೆ ಎಂದು ಪ್ರಹ್ಲಾದ ಜೋಶಿ ಹೇಳಿದರು.
ಆರ್ ಜೆಡಿ ಮತ್ತು ಕಾಂಗ್ರೆಸ್ ಮೈತ್ರಿ, ಮಹಾ ಘಟ್ ಬಂಧನ್ ಕೇವಲ ಫೋಟೋಶೂಟ್ ಗಾಗಿ ಎಂಬುದನ್ನು ಮೊದಲೇ ಹೇಳಿದ್ದೆವು. ಇಂಡಿಯಾ ಒಕ್ಕೂಟ ಸೇರಿದವರಿಗೆ ಈಗ ಅದರ ನೈಜ ಅನುಭವವಾಗುತ್ತಿದೆ ಎಂದು ಜೋಶಿ ಹೇಳಿದರು.
ಜಗದೀಶ್ ಶೆಟ್ಟರ್ ಪಕ್ಷಕ್ಕೆ ಮರಳಿರುವುದು ಸಹಜವಾಗಿದೆ ಎಂದು ಸಚಿವ ಪ್ರಹ್ಲಾದ ಜೋಶಿ ಪ್ರತಿಕ್ರಿಯಿಸಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ